ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ರೈಡರ್‌ನಿಂದ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
ಜುಲೈ 21ರಂದು ಪ್ರಯಾಣದ ವೇಳೆ ಮಹಿಳಾ ಪ್ರಯಾಣಿಕರೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸವಾರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Published: 23rd July 2023 12:21 PM | Last Updated: 23rd July 2023 12:24 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಜುಲೈ 21ರಂದು ಪ್ರಯಾಣದ ವೇಳೆ ಮಹಿಳಾ ಪ್ರಯಾಣಿಕರೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸವಾರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಬೈಕ್ ರೈಡರ್ ತನಗೆ ನೀಡಿದ ಕಿರುಕುಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು, ನಗರ ಪೊಲೀಸರಿಗೆ ಟ್ಯಾಗ್ ಮಾಡಿರುವ ಪೋಸ್ಟ್ ಆಧರಿಸಿ ಹಾವೇರಿ ಮೂಲದ ಕೆ. ಶಿವಪ್ಪ (23) ಎಂಬಾತನನ್ನು ಬಂಧಿಸಲಾಗಿದೆ.
ಮಣಿಪುರದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಬೆಂಗಳೂರಿನ ಟೌನ್‌ಹಾಲ್ ಬಳಿಕ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮನೆಗೆ ತೆರಳಲು ಬುಕ್ ಮಾಡಿದ ಹಲವು ಕ್ಯಾಬ್, ಆಟೋಗಳು ರದ್ದಾದ ನಂತರ ನಾನು ಅನಿವಾರ್ಯವಾಗಿ ಬೈಕ್ ಟ್ಯಾಕ್ಸಿ ಬುಕ್ ಮಾಡಿದೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.
ಮನೆಯ ಕಡೆಗೆ ತೆರಳುತ್ತಿದ್ದ ವೇಳೆ ದಾರಿಯಲ್ಲಿ ಆತ ತನ್ನನ್ನು ಅನುಚಿತವಾಗಿ ಮುಟ್ಟಿದನು. ನಂತರ ತನಗೆ ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿದ್ದಾನೆ ಮತ್ತು ಪದೇ ಪದೆ ಕರೆ ಮಾಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಶಿವಪ್ಪ ಎಂಬುವವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: 'ಲವ್ ಯೂ' ಸಂದೇಶ, ಪದೇ ಪದೇ ಫೋನ್: ಬೆಂಗಳೂರಿನಲ್ಲಿ ರಾಪಿಡೋ ರೈಡರ್ ನಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಈ ಕುರಿತು ಸಂತ್ರಸ್ತೆ ಟ್ವೀಟ್ ಮಾಡಿದ್ದು, ನಾನು ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ. ನನ್ನ ಟ್ವೀಟ್‌ಗೆ ಲಭ್ಯವಾದ ಪ್ರತಿಕ್ರಿಯೆಗಳಿಗೆ ಧನ್ಯವಾದಗಳು ಮತ್ತು ನೀವೆಲ್ಲರೂ ತೋರಿಸಿದ ಅಪಾರ ಬೆಂಬಲಕ್ಕಾಗಿ ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ ಸಮಯದಲ್ಲಿ ಸಂದೇಶಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಾಗದಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.
I have filed a complaint with the E-City police station and they have arrested the driver. Im' overwhelmed by the responses my tweet received, and deeply grateful for the tremendous support you all have shown. I apologize for not being able to respond to DMs at the moment.. (1/2)
— Athira Purushothaman (@Aadhi_02) July 22, 2023
ಮುಂದುವರಿದು, ಆದರೆ, ನಿಮ್ಮ ಬೆಂಬಲ ಮತ್ತು ಕಾಳಜಿ ನನಗೆ ಬಹಳಷ್ಟು ಧೈರ್ಯ ನೀಡಿದೆ. ಎಲ್ಲರಿಗೂ ಧನ್ಯವಾದಗಳು. ಇದು ರ‍್ಯಾಪಿಡೋ ಬೈಕ್ ಟ್ಯಾಕ್ಸಿಯಿಂದ ನನಗಾದ ಅನುಭವ ಮಾತ್ರವಲ್ಲ. ಈ ರೀತಿ ಬಹಳ ಮಂದಿಗೆ ಆಗಿದೆ. ಹೀಗಾಗಿ, ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮತ್ತು Rapidos ನ ಸುರಕ್ಷತಾ ಕ್ರಮಗಳ ಬಗ್ಗೆ ತನಿಖೆಗೆ ಒತ್ತಾಯಿಸಲು ನಾನು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.