ದಾವಣಗೆರೆಯಲ್ಲಿ ನಿರಂತರ ಮಳೆ: ಮನೆಗೋಡೆ ಕುಸಿದು 1 ವರ್ಷದ ಹೆಣ್ಣು ಮಗು ಸಾವು
ಕಳೆದ ಮೂರು ದಿನಗಳಿಂದ ನಿರಂತರ ಮಳೆಯಿಂದಾಗಿ ಮನೆಗೋಡೆ ಕುಸಿದು ಬಿದ್ದು ಒಂದು ವರ್ಷದ ಹೆಣ್ಣು ಮಗು ಸ್ಫೂರ್ತಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ.
Published: 25th July 2023 11:16 AM | Last Updated: 25th July 2023 11:16 AM | A+A A-

ಸಾಂದರ್ಭಿಕ ಚಿತ್ರ
ದಾವಣಗೆರೆ: ಕಳೆದ ಮೂರು ದಿನಗಳಿಂದ ನಿರಂತರ ಮಳೆಯಿಂದಾಗಿ ಮನೆಗೋಡೆ ಕುಸಿದು ಬಿದ್ದು ಒಂದು ವರ್ಷದ ಹೆಣ್ಣು ಮಗು ಸ್ಫೂರ್ತಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ.
ಇನ್ನು ಸ್ಫೂರ್ತಿ ತಂದೆ ಕೆಂಚಪ್ಪಗೆ ಗಾಯವಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಅವರು ಅಪಾಯದಿಂದ ಪಾರಾಗಿದ್ದಾರೆ. ಗ್ರಾಮದ ಕೆಂಚಪ್ಪ ಹಾಗೂ ಲಕ್ಷ್ಮಿದೇವಿ ಅವರ ಪುತ್ರಿ ಸ್ಪೂರ್ತಿ ಮೃತಪಟ್ಟ ಮಗು. ನಿರಂತರ ಮಳೆಯಿಂದಾಗಿ ಮನೆಯ ಗೋಡೆ ಶಿಥಿಲಗೊಂಡಿತ್ತು.
ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ: 100 ಅಡಿ ತಲುಪಿದ ಕೆಆರ್‌ಎಸ್; ರೈತರ ಮೊಗದಲ್ಲಿ ಮಂದಹಾಸ
ಕಳೆದ ಮೂರು ದಿನಗಳಿಂದ ನಿರಂತರ ಮಳೆ ಹಿನ್ನೆಲೆಯಲ್ಲಿ ಮನೆ ಸಂಪೂರ್ಣವಾಗಿ ಸಂಪೂರ್ಣವಾಗಿ ಹಾಳಾಗಿದ್ದು, ನಿನ್ನೆ(ಜುಲೈ 24) ರಾತ್ರಿ ವೇಳೆ ಮಲಗಿದ್ದ ಸಂದರ್ಭದಲ್ಲಿ ಮನೆಗೋಡೆ ಕುಸಿದಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ಪೋಲಿಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಎಡಬಿಡದೆ ಜಡಿ ಮಳೆ ಸುರಿಯುತ್ತಿದೆ.