ರಾಜ್ಯದಲ್ಲಿ ಮಳೆಯ ಆರ್ಭಟ: ಉಡುಪಿ, ದಕ್ಷಿಣ ಕನ್ನಡ ಸೇರಿ ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಮುಂದಿನ 24 ಘಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಮುಂದಿನ 24 ಘಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ನಾಳೆ ಈ ಎರಡು ಜಿಲ್ಲೆಗಳ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

ಕೊಡಗಿನಲ್ಲಿ ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ. ಅದೇ ರೀತಿ, ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಿಸಿ ಜಿಲ್ಲಾಡಳಿತವು ಆದೇಶಿಸಿದೆ.

ಇದೇ ವೇಳೆ ಉತ್ತರ ಕನ್ನಡ, ಬೆಳಗಾವಿ ಹಾಗೂ ಚಿತ್ರದುರ್ಗದಲ್ಲೂ ಮಳೆ ಅಬ್ಬರ ಮುಂದುವರೆಯುವ ಸಾಧ್ಯತೆ ಇರುವುದರಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

ಬೆಂಗಳೂರಿನಲ್ಲೂ ತುಂತುರು ಮಳೆಯಾಗುತ್ತಿದೆ. ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇನ್ನು ನಗರದ ಹಲವು ಕಡೆ ಮಳೆಯಾಗಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ಬೆಂಗಳೂರಿನಲ್ಲಿ ನಾಳೆಯೂ ಮಳೆಯಾಗುವ ಸಾಧ್ಯತೆ ಇದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com