ಬೆಂಗಳೂರು: ಕಾಲೇಜು ವಿದ್ಯಾರ್ಥಿ ಅನುಮಾನಾಸ್ಪದ ಸಾವು

19 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆಯ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 19 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆಯ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಾಣಸವಾಡಿಯ ರಾಮಸ್ವಾಮಿಪಾಳ್ಯ ನಿವಾಸಿ ಮರ್ವೇಶ್ ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಮರ್ವೇಶ್ ಪ್ರಥಮ ವರ್ಷದ ಬಿಕಾಂ ಓದುತ್ತಿದ್ದ.

ಮಂಗಳವಾರ ರಾತ್ರಿ 9.30ರ ಸುಮಾರಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮರ್ವೇಶ್ ನನ್ನು ಕಮ್ಮನಹಳ್ಳಿ ರಸ್ತೆಯಲ್ಲಿರುವ ಜಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ವೈದ್ಯರು ವಿದ್ಯಾರ್ಥಿ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಬಳಿಕ ಆಸ್ಪತ್ರೆಯ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುನೀಲ್ ಎಂಬಾತ ಮರ್ವೇಶ್ ನನ್ನು ಆಸ್ಪತ್ರೆಗೆ ಕರೆತಂದಿದ್ದು, ಆತನನ್ನು ಪತ್ತೆ ಮಾಡಲಾಗಿದ್ದು, ವಿಚಾರಣೆ ನಡೆಸಾಗುತ್ತಿದೆ. ಇಬ್ಬರು ವ್ಯಕ್ತಿಗಳು ಮರ್ವೇಶ್ ನನ್ನು ನನ್ನ ಬಳಿ ಬಿಟ್ಟಿದ್ದರು ಎಂದು ವಿಚಾರಣೆ ವೇಳೆ ಸುನೀಲ್ ಹೇಳಿದ್ದಾನೆಂದು ತಿಳಿದುಬಂದಿದೆ.

ಈ ನಡುವೆ ತಮ್ಮ ಮಗನ ಸ್ನೇಹಿತರೊಬ್ಬರು ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಮರ್ವೇಶ್ ನನ್ನು ಕೇಳಿಕೊಂಡು ಮನೆಗೆ ಬಂದಿದ್ದರು. ಆದರೆ, ಇನ್ನೂ ಮನೆಗೆ ಬಂದಿಲ್ಲ ಎಂದು ಹೇಳಿದಾಗ ಹಿಂತಿರುಗಿದ್ದರು ಎಂದು ಪೋಷಕರು ಹೇಳಿದ್ದಾರೆ.

ಈ ಮಾಹಿತಿಯ ಆಧಾರದ ಮೇಲೆ ನಾವು ಆರೋಪಿಗಳ ಪತ್ತೆ ಮಾಡಲಾಗುತ್ತಿದೆ ಎಂದು ಡಿಸಿಪಿ (ಪೂರ್ವ) ಡಾ.ಭೀಮಾಶಂಕರ್ ಎಸ್ ಗುಳೇದ್ ತಿಳಿಸಿದ್ದಾರೆ.

ಆರೋಪಿಗಳು ಮರ್ವೇಶ್ ನನ್ನು ಕೊಠಡಿಯೊಂದಕ್ಕೆ ಕರೆದೊಯ್ದಿದ್ದು, ಮನಬಂದಂತೆ ಥಳಿಸಿದ್ದಾನೆ. ನಂತರ ಆತ ಕುಸಿದು ಬೀಳುತ್ತಿದ್ದಂತೆಯೇ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಕೆಲ ಜಗಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬನಿಗಾಗಿ ಆರೋಪಿಗಳು ಹುಡುಕಾಟ ನಡೆಸುತ್ತಿದ್ದರು. ಆದರೆ, ತಪ್ಪಾದ ಗುರುತಿನಿಂದ ಮರ್ವೇಶ್ ನನ್ನು ವಶಕ್ಕೆ ಪಡೆದು ಹತ್ಯೆ ಮಾಡಿದ್ದಾರೆಂಬ ಶಂಕೆಗಳು ವ್ಯಕ್ತವಾಗಿವೆ. ಪ್ರಕರಣ ಸಂಬಂಧ ಎಲ್ಲಾ ಆಯಾಮದಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com