ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜನವರಿಯಿಂದ ಇಲ್ಲಿಯವರೆಗೆ 398 ಅಪಘಾತ, 121 ಸಾವು: ನಿತಿನ್ ಗಡ್ಕರಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅಂಕಿಅಂಶಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ
Updated on

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅಂಕಿಅಂಶಗಳನ್ನು ಸಲ್ಲಿಸಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಇಂಡಿಯನ್ ರೋಡ್ ಕಾಂಗ್ರೆಸ್ (ಐಆರ್‌ಸಿ) ಮಾರ್ಗಸೂಚಿಗಳ ಪ್ರಕಾರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ವೇಗ ಮಿತಿ ಸೂಚನಾ ಫಲಕಗಳನ್ನು ಅಳವಡಿಸಿದೆ ಎಂದು ಹೇಳಿದರು.

ಅಲ್ಲದೆ ನಾಲ್ಕು ಮಾರ್ಗದ ಗಸ್ತು ವಾಹನಗಳನ್ನು ನಿಯೋಜಿಸುವುದರ ಜೊತೆಗೆ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಹೆಚ್ಚುವರಿ ಮಾಹಿತಿ ಫಲಕಗಳನ್ನು ಸಹ ಒದಗಿಸಿದೆ. ಕ್ಯಾಮೆರಾ ಕಣ್ಗಾವಲು, ಓವರ್‌ಹೆಡ್ ಮಾಹಿತಿ ವೇರಿಯಬಲ್ ಮೆಸೇಜ್ ಸಿಗ್ನಲ್‌ಗಳು (ವಿಎಂಎಸ್) ಸೇರಿದಂತೆ ಇತರ ಸುರಕ್ಷತಾ ಕ್ರಮಗಳು ಮತ್ತು ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು ಮತ್ತು ಎಲ್ಲಾ ಮೋಟಾರು ರಹಿತ ವಾಹನಗಳನ್ನು ನಿಷೇಧಿಸುವ ಕ್ರಮ ಕೈಗೊಂಡಿದೆ. ಪೊಲೀಸರು ಇಂಟರ್‌ಸೆಪ್ಟರ್‌ಗಳೊಂದಿಗೆ ವೇಗದ ಮಿತಿಗಳನ್ನು ಜಾರಿಗೊಳಿಸುತ್ತಾರೆ ಎಂದು ಅವರು ವಿವರಿಸಿದರು.

ಪ್ರಥಮ ಚಿಕಿತ್ಸಾ ಸೌಲಭ್ಯಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಮೂಲಭೂತ ಜೀವಾಧಾರಕ ವ್ಯವಸ್ಥೆಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಯೊಂದಿಗೆ ನಾಲ್ಕು ಆಂಬ್ಯುಲೆನ್ಸ್‌ಗಳನ್ನು ಎಕ್ಸ್‌ಪ್ರೆಸ್‌ವೇನಲ್ಲಿ ತುರ್ತು ಪರಿಸ್ಥಿತಿಗಳ ಸಂದರ್ಭಗಳಿಗೆ ನಿಯೋಜಿಸಲಾಗಿದೆ. ಟೋಲ್ ಪ್ಲಾಜಾದಲ್ಲಿ ಪ್ರಥಮ ಚಿಕಿತ್ಸೆಯೊಂದಿಗೆ ವೈದ್ಯಕೀಯ ಚಿಕಿತ್ಸಾ ಪೋಸ್ಟ್ ಅನ್ನು ಸಹ ಒದಗಿಸಲಾಗಿದೆ ಎಂದರು.

ಹೆದ್ದಾರಿಯಲ್ಲಿ ಟೋಲ್ ಶುಲ್ಕದ ಬಗ್ಗೆ ದೊಡ್ಡ ಪ್ರಮಾಣದ ಸಾರ್ವಜನಿಕ ಅಸಮಾಧಾನವಿದೆಯೇ ಎಂದು ಕೇಳಲಾದ ಪ್ರಶ್ನೆಗೆ, ತಿದ್ದುಪಡಿಗಳೊಂದಿಗೆ ಎನ್‌ಎಚ್ ಶುಲ್ಕ ನಿಯಮಗಳು 2008 ರ ಪ್ರಕಾರ ಬಳಕೆದಾರರ ಶುಲ್ಕವನ್ನು ವಿಧಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com