ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ

ದಕ್ಷಿಣ ಕನ್ನಡದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆಯೇ ನೈತಿಕ ಪೊಲೀಸ್ ಗಿರಿ: ಇಬ್ಬರ ಬಂಧನ

ಮಂಗಳೂರಿನ ಬಿಸಿ ರೋಡ್ ನಲ್ಲಿ ಕಳೆದ ರಾತ್ರಿ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ಪತ್ನಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನೈತಿಕ ಪೊಲೀಸ್ ಗಿರಿ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಮಂಗಳೂರು: ಮಂಗಳೂರಿನ ಬಿಸಿ ರೋಡ್ ನಲ್ಲಿ ಕಳೆದ ರಾತ್ರಿ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ಪತ್ನಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನೈತಿಕ ಪೊಲೀಸ್ ಗಿರಿ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಕುಡಿದ ಅಮಲಿನಲ್ಲಿದ್ದ ಆರೋಪಿ ಮನೀಶ್ ಮತ್ತು ಮಂಜುನಾಥ್ 'ಮುಸ್ಲಿಂ; ಎಂದು ಭಾವಿಸಿ ಪೊಲೀಸ್ ಸಿಬ್ಬಂದಿ ಕುಮಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. 

ಜಿಲ್ಲಾ ಪೊಲೀಸರೊಂದಿಗೆ ಕೆಲಸ ಮಾಡುತ್ತಿದ್ದ ಕುಮಾರ್ ಅವರು ರೆಸ್ಟೋರೆಂಟ್ ನಲ್ಲಿ ಊಟ ಮುಗಿಸಿ ತನ್ನ ಪತ್ನಿ ಮತ್ತು ಆಕೆಯ ಸಹೋದರಿಯನ್ನು ತನ್ನ ಕ್ವಾರ್ಟರ್ಸ್‌ಗೆ ಬಿಡಲು ಹೋಗುತ್ತಿದ್ದಾಗ ಆರೋಪಿಗಳು ಪೊಲೀಸ್ ಸಿಬ್ಬಂದಿಯನ್ನು ಹಿಂಬಾಲಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸರ ಪ್ರಕಾರ, ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಬಿ ಸಿ ರೋಡ್‌ನಲ್ಲಿರುವ ತನ್ನ ಕ್ವಾರ್ಟರ್ಸ್‌ಗೆ ಕುಮಾರ್ ಹೋಗುತ್ತಿದ್ದಾಗ ಇಬ್ಬರೂ ಅವರನ್ನು ಹಿಂಬಾಲಿಸಲು ಪ್ರಾರಂಭಿಸಿದರು. ಕುಮಾರ್ ತನ್ನ ಹೆಂಡತಿ ಮತ್ತು ಆಕೆಯ ಸಹೋದರಿಯನ್ನು ಬಿಟ್ಟು ತನ್ನ ಕರ್ತವ್ಯಕ್ಕೆ ಮರಳಲು ಹೋಗುತ್ತಿದ್ದಾಗ, ಆತನನ್ನು ದಾರಿಯಲ್ಲಿ ಅಡ್ಡಗಟ್ಟಿ, ಮಹಿಳೆಯರ ಸಹವಾಸದಲ್ಲಿ ಏಕೆ ಇದ್ದೀರಿ ಎಂದು ಇಬ್ಬರೂ ಪ್ರಶ್ನಿಸಿದರು. ಆರೋಪಿಗಳು ಕುಮಾರ್ ಗೆ ನಿಂದಿಸಿ ಕಿರುಕುಳ ನೀಡಿದ್ದಾರೆ. 

ಏತನ್ಮಧ್ಯೆ, ಗಲಾಟೆಯಿಂದ ಕುಮಾರ್ ಅವರ ಪತ್ನಿ ಮನೆಯಿಂದ ಹೊರಬಂದಾಗ, ಆರೋಪಿಗಳು ಅವರನ್ನು ನಿಂದಿಸಿದ್ದಾರೆ. ಅಲ್ಲದೆ ಕುಮಾರ್ ಅವರ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಈ ವೇಳೆ ತಾನು ಪೊಲೀಸ್ ಎಂದು ಕುಮಾರ್ ಅವರಿಗೆ ಹೇಳಿದ್ದು ಅವರು ನನ್ನ ಹೆಂಡತಿ ಮತ್ತು ಅತ್ತಿಗೆ ಎಂದು ಹೇಳಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಅನುಚಿತವಾಗಿ ವರ್ತಿಸಿದ್ದಾರೆ.

ಆರೋಪಿಗಳ ಮೇಲೆ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹೊರಿಸಲಾಗಿದ್ದು ಸೆಕ್ಷನ್ 341(ತಪ್ಪು ಸಂಯಮ), 504(ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 354(ಡಿ)(ಹಿಂಬಾಲಿಸುವಿಕೆ), 354(ಎ)( ಭಾರತೀಯ ದಂಡ ಸಂಹಿತೆಯ ದೈಹಿಕ ಸಂಪರ್ಕ ಮತ್ತು ಇಷ್ಟವಿಲ್ಲದ ಮತ್ತು ಸ್ಪಷ್ಟವಾದ ಲೈಂಗಿಕ ಪ್ರಲೋಭನೆಗಳನ್ನು ಒಳಗೊಂಡ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇವರಿಬ್ಬರು ಯಾವುದೇ ಬಲಪಂಥೀಯ ಸಂಘಟನೆಗೆ ಸೇರಿದ್ದಾರೆಯೇ ಇಲ್ಲವೇ ಎಂಬುದರ ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ಹೇಳಿದ್ದಾರೆ.
 

Related Stories

No stories found.

Advertisement

X
Kannada Prabha
www.kannadaprabha.com