ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ, ಯುವ ಕಲಾವಿದ ಸಾವು

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಶನಿವಾರ ಮತ್ತೊಂದು ಅಪಘಾತವಾಗಿದೆ. ಮಂಡ್ಯ ತಾಲೂಕಿನ ಯಲಿಯೂರು ಬಳಿ ಮುಂಜಾನೆ ನಡೆದ ಅಪಘಾತದಲ್ಲಿ ಯುವ ಚಿತ್ರಕಲಾ ಕಲಾವಿದ, ನಟ ಲೋಕೇಶ್ ಮೃತಪಟ್ಟಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು.
ಲೋಕೇಶ್
ಲೋಕೇಶ್

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಶನಿವಾರ ಮತ್ತೊಂದು ಅಪಘಾತವಾಗಿದೆ. ಮಂಡ್ಯ ತಾಲೂಕಿನ ಯಲಿಯೂರು ಬಳಿ ಮುಂಜಾನೆ ನಡೆದ ಅಪಘಾತದಲ್ಲಿ ಯುವ ಚಿತ್ರಕಲಾ ಕಲಾವಿದ, ನಟ ಲೋಕೇಶ್ ಮೃತಪಟ್ಟಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು.

ಕೈ ಕಾಲು ತುಂಡಾದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಅವರು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ದೊಡ್ಡತುಪ್ಪೂರು ಗ್ರಾಮದವರಾದ ಲೋಕೇಶ್ ಹಲವು ಕಲಾ ನಿರ್ದೇಶಕರ ಬಳಿ ಕೆಲಸ ಮಾಡಿದ್ದರು. ಅಮೂಲ್ಯ ರತ್ನ ಕಿರುಚಿತ್ರ ಹಾಗೂ ಫ್ಯಾಮಿಲಿ ಪ್ಯಾಕ್ ಚಲನಚಿತ್ರದಲ್ಲಿ ಅವರು ಅಭಿನಯಿಸಿದ್ದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com