ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ನಾಳೆ ಭೇಟಿ ಹಿನ್ನೆಲೆ; ಗೃಹ ಸಚಿವರು, ಡಿಜಿ, ಐಜಿಪಿಯೊಂದಿಗೆ ಸಿಎಂ ಮಾತುಕತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿಯೋರ್ವಳ ಖಾಸಗಿ ದೃಶ್ಯ ಚಿತ್ರೀಕರಣ ಮಾಡಿರುವ ಪ್ರಕರಣ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಮತ್ತು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರಿಂದ ಭಾನುವಾರ ಮಾಹಿತಿ ಪಡೆದರು. 
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿಯೋರ್ವಳ ಖಾಸಗಿ ದೃಶ್ಯ ಚಿತ್ರೀಕರಣ ಮಾಡಿರುವ ಪ್ರಕರಣ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಮತ್ತು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರಿಂದ ಭಾನುವಾರ ಮಾಹಿತಿ ಪಡೆದರು. 

ಸಿದ್ದರಾಮಯ್ಯ ಅವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಉಡುಪಿ ಮತ್ತು ಮಂಗಳೂರು ಜಿಲ್ಲೆಗಳ ಸಮಗ್ರ ಪ್ರಗತಿಯನ್ನು ಆಯಾ ಜಿಲ್ಲಾ ಪಂಚಾಯತ್‌ಗಳಲ್ಲಿ ಪರಿಶೀಲಿಸಲಿದ್ದಾರೆ. ಮುಖ್ಯಮಂತ್ರಿಗಳು ಎರಡು ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡುತ್ತಿರುವ ಕಾರಣ ಈ ಕುರಿತು ಮಾಹಿತಿ ನೀಡುವ ಅಗತ್ಯವಿದೆ.

ಸಿದ್ದರಾಮಯ್ಯ, ಪರಮೇಶ್ವರ್ ಮತ್ತು ಅಲೋಕ್ ಮೋಹನ್ ಅವರು ಅಜ್ಞಾತ ಸ್ಥಳದಲ್ಲಿ ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಕುತೂಹಲಕಾರಿಯಾಗಿ, ಮೂವರು ತಮ್ಮ ಬೆಂಗಾವಲು ವಾಹನಗಳನ್ನು ಬಿಟ್ಟು ಒಂದೇ ಕಾರನ್ನು ಹತ್ತಿ ಅಜ್ಞಾನ ಸ್ಥಳದಲ್ಲಿ ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದೆ. ಪ್ರತಿಪಕ್ಷ ಬಿಜೆಪಿಯು ವಿಡಿಯೋ ಚಿತ್ರೀಕರಣ ಘಟನೆಯ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದರಿಂದ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ಚರ್ಚಿಸಿದ್ದಾರೆ ಎನ್ನಲಾಗಿದೆ. 

ಇದು ಕೇವಲ  ಮಕ್ಕಳಾಟವಾಗಿದ್ದು, ಇದಕ್ಕೆ ಯಾವುದೇ ಕೋಮು ಅಥವಾ ರಾಜಕೀಯ ಬಣ್ಣ ನೀಡಬಾರದು ಎಂದು ಪರಮೇಶ್ವರ್ ಅವರು ಪರಿಸ್ಥಿತಿಯನ್ನು ಹತೋಟಿಗೆ ತರಲು ಯತ್ನಿಸಿದ್ದಾರೆ. ಆದರೆ ಸರ್ಕಾರದ ಮೇಲೆ ದಾಳಿ ಮಾಡಲು ಬಿಜೆಪಿಗೆ ಆಸ್ತ್ರ ನೀಡಿದ್ದು, ಇತ್ತೀಚೆಗೆ ಉಡುಪಿಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.  

ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಳಾ ನಟರಾಜ್ ಅವರು ಟ್ವಿಟರ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಿದ್ದು, ಸರ್ಕಾರವು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅವರು ಸಿದ್ದರಾಮಯ್ಯ ಅವರ ಪತ್ನಿ ಮತ್ತು ಸೊಸೆಯ ಹೆಸರನ್ನು ತೆಗೆದುಕೊಂಡ ನಂತರ ಪೊಲೀಸರು ಅವರನ್ನು ಬಂಧಿಸಿದರು. ತನ್ನ ಟ್ವೀಟ್‌ಗೆ ಕ್ಷಮೆಯಾಚಿಸಿ ಜಾಮೀನಿನ ಮೇಲೆ ಹೊರಬಂದಿದ್ದಾಳೆ.

ಈ ಮಧ್ಯೆ  ಮಣಿಪುರದ ಹಿಂಸಾಚಾರವನ್ನು ತಡೆಯುವಲ್ಲಿ ಕೇಂದ್ರದ ವೈಫಲ್ಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ನಾಯಕರು ಉಡುಪಿಯ ವಂಚನೆ ಪ್ರಕರಣವನ್ನು ಸಂಚಲನ ಮೂಡಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆರೋಪಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com