ಬೀದರ್: ಮಗಳ ಮೇಲೆ ನಿರಂತರ ಅತ್ಯಾಚಾರ, ತಂದೆ ಬಂಧನ!

ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ಬಳಿ ನಡೆದಿದೆ. ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಬಸವ ಕಲ್ಯಾಣ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೀದರ್: ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ಬಳಿ ನಡೆದಿದೆ. ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಬಸವ ಕಲ್ಯಾಣ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಕೊರೋನಾ ಲಾಕ್ ಡೌನ್ ವೇಳೆ ಶಾಲೆಗೆ ರಜೆ ಘೋಷಿಸಿದ ನಂತರ ಮನೆಯಲ್ಲಿ ಯಾರು ಇಲ್ಲದಾಗ ಬಲವಂತವಾಗಿ ಅತ್ಯಾಚಾರ ನಡೆಸಿ ಯಾರಿಗೂ ವಿಷಯ ಹೇಳದಂತೆ ಬಾಲಕಿಗೆ ಆರೋಪಿ ತಂದೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. 

ಇತ್ತೀಚಿಗೆ ಪ್ರಕರಣ ಬೆಳಕಿಗೆ ಬಂದಿದ್ದು, ದೂರಿನ ಮೇರೆಗೆ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com