ಬೀದರ್: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆ!

ಅಪ್ರಾಪ್ತ ಮಗಳ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ. 
ಅತ್ಯಾಚಾರ (ಸಂಗ್ರಹ ಚಿತ್ರ)
ಅತ್ಯಾಚಾರ (ಸಂಗ್ರಹ ಚಿತ್ರ)

ಬೀದರ್: ಅಪ್ರಾಪ್ತ ಮಗಳ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ. ಆರೋಪಿ ವ್ಯಕ್ತಿ ನಾಪತ್ತೆಯಾಗಿದ್ದಾನೆ. ಬಸವಕಲ್ಯಾಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 

ಮನೆಯಲ್ಲಿ ಎಲ್ಲರೂ ನಿದ್ದೆ ಮಾಡುವಾಗ ಆರೋಪಿ ಮಗಳ ಮೇಲೆ ಅತ್ಯಾಚಾರವೆಸಗುತ್ತಿದ್ದ. ತಂದೆಯಿಂದ ಈ ಪೈಶಾಚಿಕ ಕೃತ್ಯ ಹಲವು ತಿಂಗಳುಗಳಿಂದ ನಡೆಯುತ್ತಿತ್ತು. ಈ ಕೃತ್ಯವನ್ನು ಬಹಿರಂಗಗೊಳಿಸದಂತೆ ಮಗಳಿಗೆ ಬೆದರಿಕೆ ಹಾಕುತ್ತಿದ್ದ ಎಂದು ತಿಳಿದುಬಂದಿದೆ. 

ಆದರೆ ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದು, ಪತಿ ಆಕೆಯನ್ನೂ ಥಳಿಸಿದ್ದಾನೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ಆಪ್ತ ಸಲಹೆ ನೀಡಿದಾಗ ಈ ಕೃತ್ಯ ಬಹಿರಂಗಗೊಂಡಿದೆ. ಪ್ರಕರಣವನ್ನು ಪೊಲೀಸರಿಗೆ ವಹಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com