ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್ ಅಹ್ಮದ್ ನೇಮಕ!
ಸಿಎಂ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯರಾದ ಕೆ. ಗೋವಿಂದರಾಜ್ ಮತ್ತು ನಜೀರ್ ಅಹ್ಮದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Published: 01st June 2023 09:04 PM | Last Updated: 01st June 2023 09:04 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯರಾದ ಕೆ. ಗೋವಿಂದರಾಜ್ ಮತ್ತು ನಜೀರ್ ಅಹ್ಮದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರನ್ನು ನೇಮಕ ಮಾಡುವ ಮೂಲಕ ಸಂಪುಟ ದರ್ಜೆ ಸ್ಥಾನಮಾನಗಳನ್ನು ನೀಡಲಾಗಿದೆ.
ಇದನ್ನೂ ಓದಿ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
ಇನ್ನು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಚುನಾವಣಾ ನೀತಿ ರೂಪಿಸಿದ್ದ ಸುನೀಲ್ ಕನುಗೋಳು ಅವರನ್ನು ಸಿಎಂ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ನಾಲ್ವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.