10 ಕೆ ಜಿ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆ ಜಾರಿ ಖಂಡಿತಾ ಮಾಡುತ್ತೇವೆ, ಅದರಲ್ಲಿ ಎರಡು ಮಾತಿಲ್ಲ: ಕೆ ಎಚ್ ಮುನಿಯಪ್ಪ
ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ನೀಡಿದ್ದ ಪಂಚ ಗ್ಯಾರಂಟಿ ಯೋಜನೆ ಭಾಗ್ಯಗಳ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.
Published: 01st June 2023 01:55 PM | Last Updated: 01st June 2023 01:55 PM | A+A A-

ಕಾಂಗ್ರೆಸ್ ನ ಗ್ಯಾರಂಟಿ ಅನ್ನಭಾಗ್ಯ ಯೋಜನೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ನೀಡಿದ್ದ ಪಂಚ ಗ್ಯಾರಂಟಿ ಯೋಜನೆ ಭಾಗ್ಯಗಳ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.
ಈ ಬಗ್ಗೆ ಇಂದು ಮಾತನಾಡಿದ ಆಹಾರ ಖಾತೆ ಸಚಿವ ಕೆ ಎಚ್ ಮುನಿಯಪ್ಪ, ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ನಾಳೆ ತೀರ್ಮಾನ ಮಾಡುತ್ತೇವೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ಪ್ರತಿ ಕುಟುಂಬ ಸದಸ್ಯರಿಗೆ 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ, ಅದರಲ್ಲಿ ಎರಡನೇ ಮಾತಿಲ್ಲ. 5 ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಜಾರಿ ಮಾಡುತ್ತೇವೆ. ಭಾರತದಲ್ಲಿ ಭತ್ತವನ್ನು ಸಾಕಷ್ಟು ಪ್ರಮಾಣದಲ್ಲಿ ಬೆಳೆಯುತ್ತಾರೆ. ಕೇಂದ್ರ ಸರ್ಕಾರಕ್ಕೆ 5 ಕೆಜಿ ಅಕ್ಕಿ ನೀಡುವಂತೆ ಮನವಿ ಮಾಡುತ್ತೇವೆ. ಒಂದು ವೇಳೆ ಕೇಂದ್ರ ಸರ್ಕಾರ ಕೊಡದಿದ್ದರೆ ಟೆಂಡರ್ ಕರೆಯುತ್ತೇವೆ. ನಾವೇ ಟೆಂಡರ್ ಮೂಲಕ ಅಕ್ಕಿ ಖರೀದಿಸಿ ವಿತರಣೆ ಮಾಡುತ್ತೇವೆ ಎಂದು ಹೇಳಿದರು.