ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಕಡ್ಡಾಯ: ಸಚಿವ ಹೆಚ್ ಸಿ ಮಹದೇವಪ್ಪ
ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಮತ್ತು ಅರ್ಥೈಸುವುದನ್ನು ಕಡ್ಡಾಯಗೊಳಿಸಿ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ.
Published: 01st June 2023 11:16 PM | Last Updated: 02nd June 2023 07:59 PM | A+A A-

ಸಂವಿಧಾನ ಪ್ರಸ್ತಾವನೆ ಓದಿದ ಸಚಿವ ಹೆಚ್ ಸಿ ಮಹದೇವಪ್ಪ
ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಮತ್ತು ಅರ್ಥೈಸುವುದನ್ನು ಕಡ್ಡಾಯಗೊಳಿಸಿ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ.
ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ (Indian Constitution) ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ಸಿ ಮಹದೇವಪ್ಪ (HC Mahadevappa) ಮಾಹಿತಿ ನೀಡಿದ್ದು, ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ https://t.co/3JYWV5DEzc
— Dr H.C.Mahadevappa (@CMahadevappa) June 1, 2023
‘ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಇಂದು ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್ ಹ್ಯಾಂಡಲ್ನಿಂದ ಟ್ವೀಟ್ ಮಾಡಲಾಗಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಸೋಮೇಶ್ವರ ಬೀಚ್ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ
ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.
Social welfare @DrHCMahadevappa administers oath on the preamble of India's constitution to the officials.
— Devaraj Hirehalli Bhyraiah (@swaraj76) June 1, 2023
"Reading out the same in schools & colleges daily will be made mandatory".@XpressBengaluru @AshwiniMS_TNIE @ramupatil_TNIE pic.twitter.com/28PXWspd3f
ಗುರುವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಸಭೆಗೂ ಮುನ್ನ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಸಂವಿಧಾನದ ಪೀಠಿಕೆಯನ್ನು ಓದಿದರು. ರಾಜ್ಯಾದ್ಯಂತ ಶಾಲೆ, ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಪಠಿಸುವುದು ಕಡ್ಡಾಯಗೊಳಿಸಲಾಗಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.