ತುಮಕೂರು: ಲಂಚ ಪಡೆದಿದ್ದ ಮಹಿಳಾ ಅಧಿಕಾರಿ ಯಶೋಧ ಕೆಲಸದಿಂದಲೇ ವಜಾ
ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಉಪನೋಂದಣಾಧಿಕಾರಿ ಕಚೇರಿಯ ಹಿಂದಿನ ಪ್ರಭಾರ ಉಪನೋಂದಣಾಧಿಕಾರಿ ಹಾಗೂ ಹಾಲಿ ಪ್ರಥಮ ದರ್ಜೆ ಸಹಾಯಕಿ...
Published: 01st June 2023 01:47 PM | Last Updated: 01st June 2023 01:47 PM | A+A A-

ಯಶೋಧ
ತುಮಕೂರು: ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಉಪನೋಂದಣಾಧಿಕಾರಿ ಕಚೇರಿಯ ಹಿಂದಿನ ಪ್ರಭಾರ ಉಪನೋಂದಣಾಧಿಕಾರಿ ಹಾಗೂ ಹಾಲಿ ಪ್ರಥಮ ದರ್ಜೆ ಸಹಾಯಕಿ ಯಶೋಧ ಅವರನ್ನು ರಾಜ್ಯ ಸರ್ಕಾರ ಕೆಲಸದಿಂದಲೇ ವಜಾಗೊಳಿಸಿದೆ.
ಯಶೋಧ ಅವರು ತಮ್ಮ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಮಂಜುನಾಥ್ ಎಂಬುವರು ದೂರು ನೀಡಿದ್ದರು. ತನಿಖೆಯಲ್ಲಿ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆಯಲ್ಲಿ ಯಶೋಧ ಅವರನ್ನು ಸರ್ಕಾರಿ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಿ ಆದೇಶಿಸಲಾಗಿದೆ.
ಇದನ್ನು ಓದಿ: ಲಂಚ ಸ್ವೀಕರಿಸುತ್ತಿದ್ದಾಗ ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ!
ನೋಂದಣಿಗಳ ಮಹಾಪರಿವಿಕಕ್ಷರು ಹಾಗೂ ಮುದ್ರಾಂಕ ಇಲಾಖೆ ಆಯುಕ್ತರಾದ ಡಾ. ಮಮತಾ ಬಿ.ಆರ್ ಅವರು ಈ ಆದೇಶ ಹೊರಡಿಸಿದ್ದಾರೆ.