ಸಿಎಂ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇಮಕ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇಮಕವಾಗಿದ್ದು, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ.
Published: 01st June 2023 11:42 PM | Last Updated: 02nd June 2023 08:00 PM | A+A A-

ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇಮಕವಾಗಿದ್ದು, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ.
#Virajpet MLA AS Ponnanna to be appointed as the legal advisor (with cabinet rank) to CM Siddaramaiah... #Kodagu residents demanded cabinet berth to Ponnanna & several memorandums were sent to the CM in this regard from various organizations...@XpressBengaluru pic.twitter.com/iLgxGDhPdC
— Prajna G R (@prajna_gr) June 1, 2023
ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಈ ಕೂಡಲೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್ ಅಹ್ಮದ್ ನೇಮಕ!
ಈ ಹಿಂದೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕಾನೂನು ಸಲಹೆಗಾರರನ್ನಾಗಿ (ಕ್ಯಾಬಿನೆಟ್ ದರ್ಜೆಯೊಂದಿಗೆ) ನೇಮಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಕೊಡಗು ನಿವಾಸಿಗಳು ಪೊನ್ನಣ್ಣ ಅವರಿಗೆ ಸಂಪುಟ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿವಿಧ ಸಂಘಟನೆಗಳಿಂದ ಮನವಿ ಪತ್ರ ಬರೆದಿದ್ದಾರೆ.