
ಸಿದ್ದರಾಮಯ್ಯ
ಬೆಂಗಳೂರು: ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಬೆಂಗಳೂರು ವಕೀಲರ ಸಂಘ ಬುಧವಾರ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ವಕೀಲ ಸಮೂಹ ಈ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ನಾನೂ ಬೆಂಬಲ ಸೂಚಿಸಿ ವಿಧಾನಸಭೆಯಲ್ಲಿ ವಕೀಲ ಸಮೂಹದ ಪರವಾಗಿ ಧ್ವನಿ ಎತ್ತಿದ್ದೆ. ಈಗ ನಾವೇ ಅಧಿಕಾರಕ್ಕೆ ಬಂದಿದ್ದೇವೆ. ಈಗ ಈ ಕಾಯ್ದೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಬದ್ದವಾಗಿದ್ದೇವೆ ಎಂದು ಆಶ್ವಾಸನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ವಕೀಲರ ಸಂಘದ ಸದಸ್ಯರು “ವಕೀಲರ ವಿಮೆ ಯೋಜನೆಯನ್ನೂ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದಸಿಎಂ ಈ ಬಗ್ಗೆಯೂ ಸಮಗ್ರವಾಗಿ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕಾಯ್ದೆ ಜಾರಿಗೆ ಆಗ್ರಹಿಸಿ ವಕೀಲ ಸಮೂಹ ಪ್ರತಿಭಟನೆ ನಡೆಸಿತ್ತು. ಅಂದು ವಿರೋಧ ಪಕ್ಷದ ನಾಯಕನಾಗಿದ್ದ ನಾನು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದೆ. ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದೆ. ಈಗ ನಾವೇ ಅಧಿಕಾರಕ್ಕೆ ಬಂದಿದ್ದೇವೆ. ಹಾಗಾಗಿ, ಕಾಯ್ದೆ ಜಾರಿಗೆ ತರಲು ಕ್ರಮಕೈಗೊಳ್ಳಲಾಗುವುದು. ವಕೀಲರ ಸಂಘದ ಕೋರಿಕೆಯಂತೆ ವಕೀಲರ ವಿಮಾ ಯೋಜನೆಯನ್ನೂ ಜಾರಿಗೆ ತರಲಾಗುವುದು ಎಂದರು.
ಸ್ಥಾನ ಯಾವುದೇ ಇರಲಿ, ಸ್ಪಂದಿಸುವ ಗುಣ ಇಲ್ಲದಿದ್ದರೆ ಸಮಾಜದ ಕಡೆಯ ಮನುಷ್ಯನಿಗೆ ನ್ಯಾಯ ದೊರಕಿಸುವುದು ಅಸಾಧ್ಯ. ಉನ್ನತ ಅವಕಾಶಗಳು ಸಿಕ್ಕಾಗ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು. ಪ್ರಾಮಾಣಿಕವಾಗಿ ಜನಸೇವೆ ಮಾಡಿದರೆ ಆ ಸ್ಥಾನದ ಘನತೆ ಹೆಚ್ಚುತ್ತದೆ. ಜನರ ಸಂಕಷ್ಟಗಳ ಅರಿವಿರುವ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಉತ್ತಮ ನ್ಯಾಯದಾನದ ಮೂಲಕ ತಮ್ಮ ಬದುಕು ಹಾಗೂ ವೃತ್ತಿಯನ್ನು ಸಾರ್ಥಕಗೊಳಿಸಿದ್ದಾರೆ. ವೀರಪ್ಪ ಅವರು ದಕ್ಷತೆ, ಪ್ರಾಮಾಣಿಕತೆ ಜತೆಗೆ, ವಕೀಲ ಸಮೂಹದ ಪ್ರೀತಿಯನ್ನೂ ಗಳಿಸಿದ್ದರು ಎಂದು ಶ್ಲಾಘಿಸಿದರು.