
ಖಾಸಗಿ ಬಸ್ - ಕಾರು ಮುಖಾಮುಖಿ ಡಿಕ್ಕಿ
ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಇದನ್ನು ಓದಿ: ಮೈಸೂರು ಬಳಿ ಅಪಘಾತಕ್ಕೆ 10 ಮಂದಿ ಸಾವು: ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿಕುಮಾರ್ ಅವರು ಚಿಕಿತ್ಸೆ ಫಲಿಸದೆ ಶುಕ್ರವಾರ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಇದನ್ನು ಓದಿ: ಮೈಸೂರು: ಖಾಸಗಿ ಬಸ್- ಕಾರು ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ 10 ಮಂದಿ ಸಾವು
ಕಳೆದ ಸೋಮವಾರ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿತ್ತು. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು.