ಡ್ರಗ್ಸ್ ಹಾವಳಿ: ಶಾಲಾ-ಕಾಲೇಜುಗಳ ಸುತ್ತಮುತ್ತ ಬೆಂಗಳೂರು ಪೊಲೀಸರ ಪರಿಶೀಲನೆ; 200ಕ್ಕೂ ಹೆಚ್ಚು ಜನರ ಬಂಧನ
ಬೆಂಗಳೂರು ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.
Published: 02nd June 2023 11:06 AM | Last Updated: 02nd June 2023 08:10 PM | A+A A-

ಪ್ರಾತಿನಿಧಿಕ ಚಿತ್ರ
ಬೆಂಗಳೂರು: ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಶುಕ್ರವಾರ ಪೊಲೀಸ್ ಮೂಲಗಳ ಪ್ರಕಾರ, ಕಳೆದ ಮೂರು ದಿನಗಳಿಂದ ದಾಳಿ ಮುಂದುವರೆದಿದೆ. ಮಾದಕ ದ್ರವ್ಯ ದಂಧೆಗೆ ಸಂಬಂಧಿಸಿದಂತೆ ಇದುವರೆಗೆ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ 200 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು 15 ಕಿಲೋಗ್ರಾಂಗಳಷ್ಟು ಗಾಂಜಾ ಮತ್ತು ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬೇಸಿಗೆ ರಜೆಯ ನಂತರ ಮತ್ತೆ ತೆರೆಯಲಾದ ಶಾಲಾ-ಕಾಲೇಜುಗಳ ಸುತ್ತಮುತ್ತ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ.
ಡ್ರಗ್ಸ್ ಮಾಫಿಯಾ ನಿಗ್ರಹದ ಭಾಗವಾಗಿ ನಗರದ ಎಲ್ಲಾ ವಿಭಾಗಗಳಿಂದ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪಿಜಿ, ಹಾಸ್ಟೆಲ್‌ಗಳ ಸುತ್ತಮುತ್ತಲೂ ದಾಳಿ ನಡೆಸಲಾಗಿದೆ. ಹೆಚ್ಚಿನ ವಿವರಗಳು ಇನ್ನೂ ಹೊರಬೀಳಬೇಕಿದೆ.