ಸಿಲಿಂಡರ್ ಮೇಲಿನ ಸಬ್ಸಿಡಿ ಬಿಟ್ಟಂತೆ, ಉಚಿತಗಳು ಬೇಡವೆಂದವರು ಗ್ಯಾರಂಟಿ ಯೋಜನೆಗಳನ್ನು ತ್ಯಜಿಸಬಹುದು: ಡಿಕೆ ಶಿವಕುಮಾರ್
ಕಾಂಗ್ರೆಸ್ ಸರ್ಕಾರವು ಐದು ಖಾತರಿಗಳನ್ನು ಘೋಷಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿಕೆ ನೀಡಿದ್ದು, 2 ಕೋಟಿ ಉದ್ಯೋಗ ಸೃಷ್ಟಿ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸುವ ಸರದಿ ಈಗ ಕೇಂದ್ರ ಸರ್ಕಾರದ್ದಾಗಿದೆ ಎಂದಿದ್ದಾರೆ.
Published: 03rd June 2023 02:09 PM | Last Updated: 03rd June 2023 05:07 PM | A+A A-

ಡಿಕೆ ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಐದು ಖಾತರಿಗಳನ್ನು ಘೋಷಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿಕೆ ನೀಡಿದ್ದು, 2 ಕೋಟಿ ಉದ್ಯೋಗ ಸೃಷ್ಟಿ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸುವ ಸರದಿ ಈಗ ಕೇಂದ್ರ ಸರ್ಕಾರದ್ದಾಗಿದೆ ಎಂದಿದ್ದಾರೆ.
ಶೀಘ್ರದಲ್ಲೇ ಕೇಂದ್ರ ಸರ್ಕಾರ ಅಗ್ನಿ ಪರೀಕ್ಷೆ (ಲೋಕಸಭಾ ಚುನಾವಣೆ) ಎದುರಿಸಲಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಅವರು ತಮ್ಮ ಭರವಸೆಗಳನ್ನು ಉಳಿಸಿಕೊಳ್ಳಬೇಕು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಖಾತ್ರಿ ಯೋಜನೆಗಳ ಬಗ್ಗೆ ವಿರೋಧ ಪಕ್ಷಗಳು, ವಿಶೇಷವಾಗಿ ಬಿಜೆಪಿ ಟೀಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಟೀಕೆಗಳ ಬದಲು ಪ್ರಧಾನಿ ವಿದೇಶದಲ್ಲಿರುವ ಕಪ್ಪುಹಣವನ್ನು ತರಬೇಕು ಮತ್ತು ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ. ಹಾಕಬೇಕು. ಕೊಟ್ಟ ಮಾತಿನಂತೆ 2 ಕೋಟಿ ಉದ್ಯೋಗ ಸೃಷ್ಟಿಸಿ ಮತ್ತು ರೈತರ ಆದಾಯ ದ್ವಿಗುಣಗೊಳಿಸಲಿ ಎಂದು ಹೇಳಿದರು.
ಇದನ್ನೂ ಓದಿ: ಗ್ಯಾರಂಟಿ ಕ್ರಾಂತಿ: ವಿಧಾನಸಭೆ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್'ಗೆ ಹೊಸ ಅಸ್ತ್ರ; ಬಿಜೆಪಿ-ಜೆಡಿಎಸ್ ತಬ್ಬಿಬ್ಬು!
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಕುಮಾರಸ್ವಾಮಿ ದೊಡ್ಡ ವ್ಯಕ್ತಿ. ಅವರ ಬಗ್ಗೆ ಮಾತನಾಡಲು ಬಯಸುವುದಿಲ್ಲ. ನಾನು ನನ್ನ ಕರ್ತವ್ಯಗಳನ್ನು ನಿರ್ವಹಿಸುತ್ತೇನೆ ಮತ್ತು ಅವರು ಅವರ ಕೆಲಸವನ್ನು ಮಾಡಲಿ ಎಂದರು.
ಉಚಿತವನ್ನು ನಿರಾಕರಿಸಲು ಬಯಸುವವರು ಇದಕ್ಕೆ ಅವಕಾಶವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 200 ಯೂನಿಟ್ ಉಚಿತ ವಿದ್ಯುತ್ ಬದಲಿಗೆ ಯಾರಾದರೂ ತಮ್ಮ ವಿದ್ಯುತ್ ಬಿಲ್‌ಗಳನ್ನು ಪಾವತಿಸಲು ಬಯಸಿದರೆ, ಅವರು ಪಾವತಿಸಬಹುದು. ಹಲವು ಅಧಿಕಾರಿಗಳು, ಮಾಧ್ಯಮದ ವ್ಯಕ್ತಿಗಳು ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ಬಯಸುವುದಿಲ್ಲ ಎಂದು ಪತ್ರ ಬರೆದಿದ್ದಾರೆ ಎಂದರು.
ಇದನ್ನೂ ಓದಿ: ಮಕ್ಮಲ್ ಟೋಪಿ ಹಾಕಿದ ಷರತ್ತಿನ ಸರ್ಕಾರವನ್ನು ಜನ ಕ್ಷಮಿಸುವುದಿಲ್ಲ: ಎಚ್.ಡಿ ಕುಮಾರಸ್ವಾಮಿ
ಅದಕ್ಕಾಗಿಯೇ ಪ್ರಯೋಜನಗಳನ್ನು ಪಡೆಯಲು ಅರ್ಜಿಗಳನ್ನು ಕರೆಯಲಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ಸಬ್ಸಿಡಿಯನ್ನು ಬಿಟ್ಟುಕೊಟ್ಟ ಜನರ ಸಾಲಿನಲ್ಲಿ, ಇಲ್ಲಿಯೂ ಜನರು ಖಾತರಿ ಯೋಜನೆಗಳನ್ನು ತ್ಯಜಿಸಬಹುದು. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಪರಿಹಾರ ನೀಡುವ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರುತ್ತಿದೆ ಎಂದು ಶಿವಕುಮಾರ್ ಹೇಳಿದರು.