400 ಕ್ಕೂ ಹೆಚ್ಚು ಪಶು ವೈದ್ಯರ ಹುದ್ದೆ ಭರ್ತಿಗೆ ಕ್ರಮ- ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್

400ಕ್ಕೂ ಹೆಚ್ಚು ಪಶು ವೈದ್ಯಕೀಯ ವೈದ್ಯರ ಹುದ್ದೆ ಭರ್ತಿ ಮಾಡಲಾಗುವುದು ಎಂದು ಪಶುಸಂಗೋಪನ ಹಾಗೂ ಕೃಷಿ ಖಾತೆ ಸಚಿವ ಕೆ ವೆಂಕಟೇಶ್ ತಿಳಿಸಿದ್ದಾರೆ.
ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್
ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್

ಮೈಸೂರು: 400ಕ್ಕೂ ಹೆಚ್ಚು ಪಶು ವೈದ್ಯಕೀಯ ವೈದ್ಯರ ಹುದ್ದೆ ಭರ್ತಿ ಮಾಡಲಾಗುವುದು ಎಂದು ಪಶುಸಂಗೋಪನ ಹಾಗೂ ಕೃಷಿ ಖಾತೆ ಸಚಿವ ಕೆ ವೆಂಕಟೇಶ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 4, 200 ಪಶು ವೈದ್ಯಕೀಯ ಆಸ್ಪತ್ರೆಗಳಿವೆ,  1,600 ವೈದರ ಕೊರತೆ ಇದೆ. ಮೊದಲ ಹಂತದಲ್ಲಿ 400 ವೈದ್ಯರ ನೇಮಕ ಮಾಡಲು ಮುಂದಾಗಿದ್ದೇವೆ ಎಂದು ಅವರು ವಿವರಿಸಿದರು.

ಇಲಾಖೆ ದೊಡ್ಡದಿದ್ದರೂ, ನೌಕರರ ಕೊರತೆ ಹೆಚ್ಚಾಗಿದೆ. 18 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳ ಅಗತ್ಯವಿದೆ. ಸದ್ಯಕ್ಕೆ 9 ಸಾವಿರ ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಬಾಕಿ ಹುದ್ದೆಗಳು ಖಾಲಿ ಉಳಿದಿವೆ. ಪಶು ವೈದ್ಯರ ಕೊರತೆ ಹೆಚ್ಚಾಗಿದೆ, ಸಿಬ್ಬಂದಿಯ ಕೊರತೆಯಿಂದ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲ, ಹೈನುಗಾರಿಕೆಯ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದರು. 

ರಾಜ್ಯದಲ್ಲಿ ದಿನದಿನಕ್ಕೆ ಹಾಲು ಉತ್ಪನ್ನ ಹೆಚ್ಚಾಗುತ್ತಿದೆ ಹಾಗಾಗಿ ನಂದಿನಿ ಹಾಲಿನ ಉತ್ಪನ್ನಗಳು ಹೆಚ್ಚು ಮಾಡಲು ಮುಂದಾಗಿದ್ದಾವೆ. ಹಾಲು ಉತ್ಪಾದಕ ರೈತರಿಗೆ 5.ರೂಗಳ ಪ್ರೋತ್ಸಾಹ ಹಣ ನೀಡಲಾಗುತ್ತಿದೆ. ಇದನ್ನು ಹೆಚ್ಚಿಸಲು ಹೈನುಗಾರಿಕೆಗೆ ಬಜೆಟ್ ನಲ್ಲಿ  ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ  ರೇಷ್ಮೆ ಬೆಳೆಯಲು ಪ್ರೋತ್ಸಾಹ ನೀಡಲಾಗುವುದು. ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಂಬಾಕು ಬೆಳೆಯುವ ಪ್ರದೇಶಗಳಲಿ ರೇಷ್ಮೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲಿದ್ದೇವೆ. ರೇಷ್ಮೆ ಬೆಲೆ ಕುಸಿದಿರುವ  ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೇಷ್ಮೆ ಮಾರುಕಟ್ಟೆ ಸಂಸ್ಥೆ ಮುಖಾಂತರವೇ ಖರೀದಿ ಮಾಡಲಿದ್ದೇವೆ. ಇದರಿಂದ ರೈತರಿಗೆ ಉತ್ತಮ ಬೆಲೆ ಸಿಗುವ ಸಾಧ್ಯತೆಗಳಿವೆ ಎಂದು ತಿಳಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com