ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: ಕೋಮಾದಲ್ಲಿ ಮುಂಬೈ ಮೂಲದ ಯುವಕ

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬಸಾಪುರ ರಸ್ತೆಯಲ್ಲಿರುವ ನಾಯಿ ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಮುಂಬೈ ಮೂಲದ 18 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬಸಾಪುರ ರಸ್ತೆಯಲ್ಲಿರುವ ನಾಯಿ ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಮುಂಬೈ ಮೂಲದ 18 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ನಡೆದಿದೆ.

ಜೋಶುವಾ ಡಿಸೋಜಾ (18) ಕೋಮಾ ಸ್ಥಿತಿಗೆ ತಲುಪಿಸುವ ಯುವಕನಾಗಿದ್ದಾನೆ. ಇಂಜಿನಿಯರಿಂಗ್ ಓದಲು ಬಯಸಿದ್ದ ಯುವಕ, ಕೋರ್ಸ್ ಸೇರುವ ಮುನ್ನ ಯಂತ್ರಗಳ ಬಗ್ಗೆ ತಿಳಿದುಕೊಳ್ಳಲು ನಗರಕ್ಕೆ ಬಂದಿದ್ದ. ಬೆಂಗಳೂರಿನ ಕುಕ್ ಟೌನ್‌ನಲ್ಲಿ ಉಳಿದುಕೊಂಡು ಅಲ್ಲಿದ್ದ ನಾಯಿ ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ತರಬೇತಿ ಪ್ರಾರಂಭಿಸಿದ್ದ. ಮೇ.22ರಿಂದ ತರಬೇತಿ ಪಡೆದುಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ.

ಕಾರ್ಖಾನೆಯಲ್ಲಿ ಸ್ಥಾಪಿಸಲಾಗಿದ್ದ ಬೇಕಿಂಗ್ ಟನಲ್ ಸ್ಫೋಟಗೊಂಡಾಗ ಈ ಅವಘಡ ಸಂಭವಿಸಿದೆ. ಘಟನೆ ಸಂಭವಿಸುವ ಸಂದರ್ಭದಲ್ಲಿ ಯುವಕ ಅದರ ಸಮೀಪದಲ್ಲಿಯೇ ನಿಂತಿದ್ದ ಎಂದು ವರದಿಗಳು ತಿಳಿಸಿವೆ.

ಗಾಯಗೊಂಡ ಯುವಕನನ್ನು ಕೂಡಲೇ ಇಲೆಕ್ಟ್ರಾನಿಕ್ ಸಿಟಿಯ ಕೋನಪ್ಪನ ಅಗ್ರಹಾರದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಸೇಂಟ್ ಜಾನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದೀಗ ಯುವಕನಿಕೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಜೋಶುವಾ ತಂದೆ ರಾಕಿ ಡಿಸೋಜಾ ಶಿಕ್ಷಕರಾಗಿದ್ದು, ಅವರು ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇ 30 ರಂದು ಸಂಜೆ 4 ಗಂಟೆ ಸುಮಾರಿಗೆ ಅವಘಟ ಸಂಭವಿಸಿದೆ ಎನ್ನಲಾಗಿದೆ.

"ಪೊಲೀಸರು ನನ್ನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ನನ್ನ ಮಗ ಕೋಮಾದಲ್ಲಿದ್ದಾನೆ. ಅವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಗಂಭೀರವಾಗಿದೆ ಎಂದು ರಾಕಿ ಡಿಸೋಜಾ ಅವರು ತಿಳಿಸಿದ್ದಾರೆ.

ಬೇಕಿಂಗ್ ಟನಲ್ ಅನ್ನು ತಂದ ಇಂಜಿನಿಯರಿಂಗ್, ಮಾಲೀಕರು, ಇನ್‌ಸ್ಟಾಲೇಶನ್ ಎಂಜಿನಿಯರ್, ನಿರ್ದೇಶಕರು ಸೇರಿ ನಾಯಿ ಬಿಸ್ಕೆಟ್ ತಯಾರಿಕಾ ಕಾರ್ಖಾನೆಯ ವ್ಯವಸ್ಥಾಪಕರ ವಿರುದ್ಧ ದೂರು ದಾಖಲಿಸಲಾಗಿದೆ.

ಇವರೆಲ್ಲರನ್ನೂ ವಿಚಾರಣೆಗೊಳಪಡಿಸಲಾಗಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಿದ್ದಾರೆ. ಕೆಲವು ತಾಂತ್ರಿಕ ದೋಷಗಳಿಂದ ಸ್ಫೋಟ ಸಂಭವಿಸಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com