ಬಮೂಲ್ ನಿಂದ ಹಾಲು ಉತ್ಪಾದಕರ ಸಬ್ಸಿಡಿಗೆ ಕತ್ತರಿ: ಸಿಎಂ ಸಿದ್ದರಾಮಯ್ಯ ಗರಂ, ಕಡಿತಗೊಳಿಸದಂತೆ ಎಚ್ಚರಿಕೆ
ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Published: 04th June 2023 09:35 PM | Last Updated: 04th June 2023 09:56 PM | A+A A-

ಸಿದ್ದರಾಮಯ್ಯ
ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ರೈತರಿಗೆ ಶಾಕ್: ಹಾಲಿನ ಪ್ರೋತ್ಸಾಹ ಧನ ಪ್ರತಿ ಲೀಟರ್ಗೆ 1.50 ರೂ. ಕಡಿತ
ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಸಿಎಂ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು. ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ತರಾಟೆಗೆ ತೆಗೆದುಕೊಂಡರು.