ರಾಜ್ಯದಲ್ಲಿ ಹಿಟ್ಲರ್ ಆಡಳಿತ ಎಂದ ಚಕ್ರವರ್ತಿ ಸೂಲಿಬೆಲೆಗೆ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ!

ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಹೇಳಿಕೆ ನೀಡಿದ್ದ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಬೃಹತ್ , ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ  ಸಚಿವ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಎಂಬಿ ಪಾಟೀಲ್, ಚಕ್ರವರ್ತಿ ಸೂಲಿಬೆಲೆ ಸಾಂದರ್ಭಿಕ ಚಿತ್ರ
ಎಂಬಿ ಪಾಟೀಲ್, ಚಕ್ರವರ್ತಿ ಸೂಲಿಬೆಲೆ ಸಾಂದರ್ಭಿಕ ಚಿತ್ರ

ವಿಜಯಪುರ: ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಹೇಳಿಕೆ ನೀಡಿದ್ದ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಸೂಲಿಬೆಲೆ ಟೀಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ ಹಿಜಾಬ್, ಹಲಾಲ್ ವಿಚಾರದಲ್ಲಿ ಗಲಾಟೆ ಮಾಡಿದಂಗೆ ಈಗ ನಾಟಕ ಮಾಡಿದ್ರೆ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್ ಎಂದರು.

ಇವರಿಗೇನು ಜನರು ಕೇಸರಿ ಗುತ್ತಿಗೆ ನೀಡಿಲ್ಲ. ಬಿಜೆಪಿ ಸರ್ಕಾರದಲ್ಲಿ ಹಿಜಾಬ್, ಹಲಾಲ್, ಉರಿಗೌಡ ಅಂತೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿ, ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿತ್ತು. ಇದರಿಂದ ರೋಸಿಹೋದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ನೀಡಿದ್ದಾರೆ. ಸರ್ಕಾರ ಎಲ್ಲ ಸಮುದಾಯಗಳ ರಕ್ಷಣೆ ವಿಷಯದಲ್ಲಿ ವಿಶೇಷ ಕಾಳಜಿ ತೋರಲಿದೆ ಎಂದರು. 

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಕ್ರಮಗಳ ಬಗ್ಗೆ ಸಮಗ್ರವಾಗಿ ತನಿಖೆ ಮಾಡಲಾಗುವುದು, ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ಬಗ್ಗೆ ಕೂಡ ತನಿಖೆ ಮಾಡುವುದಾಗಿ ಅವರು ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com