
ಸಾಂದರ್ಭಿಕ ಚಿತ್ರ
ಧಾರವಾಡ: ತಾಯಿ ಮನೆಯಲ್ಲಿದ್ದಿದ್ದಾಗ ಸಹೋದರಿಯರಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.
17 ವರ್ಷದ ಕಾವೇರಿ ಹಡಪದ ಹಾಗೂ 19 ವರ್ಷದ ಭೂಮಿಕಾ ಹಡಪದ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಇದನ್ನೂ ಓದಿ: ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: ಕೋಮಾದಲ್ಲಿ ಮುಂಬೈ ಮೂಲದ ಯುವಕ
ಕಲಘಟಗಿಯ ಬೆಂಡಿಗೇರಿ ಓಣಿಯ ಬಾಡಿಗೆ ಮನೆಯಲ್ಲಿ ಕುಟುಂಬ ವಾಸವಾಗಿದ್ದು ಇಂದು ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.