ಭೀಕರ ಅಪಘಾತ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು
ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಚಲಿಸುತ್ತಿದ್ದ ಡಸ್ಟ್ ತುಂಬಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಬಳಿ ನಡೆದಿದೆ.
Published: 05th June 2023 07:20 AM | Last Updated: 05th June 2023 07:20 AM | A+A A-

ಸಾಂದರ್ಭಿಕ ಚಿತ್ರ
ಮಂಡ್ಯ: ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಚಲಿಸುತ್ತಿದ್ದ ಡಸ್ಟ್ ತುಂಬಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಬಳಿ ನಡೆದಿದೆ.
ತಿರುಮಲಪುರ ಗೇಟ್ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಹೇಮಂತ್, ನವೀನ್, ಶರತ್ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತದೇಹಗಳನ್ನು ಬೆಳ್ಳೂರು ಕ್ರಾಸ್‌ನ ಬಿಜಿಎಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ನೆಲಮಂಗಲ ಮೂಲದ ನಾಲ್ವರು ತಮ್ಮ ಕಾರಿನಲ್ಲಿ ಹಾಸನಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಭಾನುವಾರ ಮುಂಜಾನೆ 5 ಗಂಟೆಯ ವೇಳೆಯಲ್ಲಿ ಈ ಅಪಘಾತ ನಡೆದಿದೆ. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ