ವಿದ್ಯುತ್ ದುಂದುವೆಚ್ಚ-ದುರುಪಯೋಗಕ್ಕೆ ಜನರಿಗೆ ಬಿಜೆಪಿಯಿಂದ ಕುಮ್ಮಕ್ಕು: ಸಿಎಂ ಸಿದ್ದರಾಮಯ್ಯ

ವಿದ್ಯುತ್ ದುಂದುವೆಚ್ಚ ಹಾಗೂ ದುರುಪಯೋಗಕ್ಕೆ ಜನರಿಗೆ ವಿಪಕ್ಷ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿದ್ಯುತ್ ದುಂದುವೆಚ್ಚ ಹಾಗೂ ದುರುಪಯೋಗಕ್ಕೆ ಜನರಿಗೆ ವಿಪಕ್ಷ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ 2023ರ ಕಾರ್ಯಕ್ರಮ ಉದ್ಘಾಟನೆ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಡಿನ ಪ್ರಜ್ಞಾವಂತ ಜನತೆ ಬಿಜೆಪಿಯ ಕುಮ್ಮಕ್ಕಿಗೆ ಗಮನ ಹರಿಸುವುದಿಲ್ಲ ಎಂಬ ಭರವಸೆ ತಮಗೆ ಇರುವುದಾಗಿ ತಿಳಿಸಿದ್ದಾರೆ.

ನೀರು, ಗಾಳಿ, ವಿದ್ಯುತ್ ನ್ನು ಹಿತಮಿತವಾಗಿ ಬಳಕೆ ಮಾಡಬೇಕು ಎಂದು ರಾಜ್ಯದ ಜನತೆಗೆ ಕರೆ ನೀಡಿರುವ ಸಿಎಂ ಸಿದ್ದರಾಮಯ್ಯ  ಇವುಗಳ ದುರುಪಯೋಗ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಆದರೆ ಉಚಿತ ವಿದ್ಯುತ್ ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳಲು ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

1 ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com