ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ವಿಚಾರಕ್ಕೆ ಜಗಳ; ಯುವಕನ ಕೊಲೆಯಲ್ಲಿ ಅಂತ್ಯ
ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಕಳೆದ ಮಧ್ಯರಾತ್ರಿ ನಡೆದಿದೆ.
Published: 05th June 2023 01:53 PM | Last Updated: 05th June 2023 06:53 PM | A+A A-

ಜಗಳ ನಡೆದು ಹತ್ಯೆಗೊಂಡ ಯುವಕ
ರಾಮನಗರ: ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಕಳೆದ ಮಧ್ಯರಾತ್ರಿ ನಡೆದಿದೆ.
ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಮಾರಾಮಾರಿಯಾಗಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್ನಲ್ಲಿ ಕೆಲಸ ಮಾಡ್ತಿದ್ದ ಪವನ್ಕುಮಾರ್(26 ವರ್ಷ) ಹತ್ಯೆ ಮಾಡಿದ್ದಾರೆ.
@XpressBengaluru ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಕಳೆದ ಮಧ್ಯರಾತ್ರಿ ನಡೆದಿದೆ. pic.twitter.com/xZVNtSVP2C
— kannadaprabha (@KannadaPrabha) June 5, 2023
ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಪವನ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಟೋಲ್ನಿಂದ ಹಿಂಬಾಲಿಸಿಕೊಂಡು ಬಂದು ದುಷ್ಕರ್ಮಿಗಳು ಪವನ್ ಹತ್ಯೆಗೈದಿದ್ದಾರೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಪವನ್ ಹೊರಟ್ಟಿದ್ದ. ಈ ವೇಳೆ ಪವನ್ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ಸ್ಟಿಕ್ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ಆರೋಪಿಗಳಿಗಾಗಿ ಬಿಡದಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.