ರಾಯಚೂರು ಬಳಿಕ ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆಯಿಂದ ವೃದ್ಧೆ ಬಲಿ: 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಯಚೂರಿನಲ್ಲಿ ಕೆಲ ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ಮೃತಪಟ್ಟ ದುರ್ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಈಗ ಕೊಪ್ಪಳ ಜಿಲ್ಲೆಯ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 65 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಕಳೆದ ಸೋಮವಾರ ರಾತ್ರಿ ನಡೆದಿದೆ. 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎಡಚಿತ್ರದಲ್ಲಿ ಮೃತಪಟ್ಟ ಮಹಿಳೆ, ಬಲಚಿತ್ರದಲ್ಲಿ ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಾಂದರ್ಭಿಕ ಚಿತ್ರ
ಎಡಚಿತ್ರದಲ್ಲಿ ಮೃತಪಟ್ಟ ಮಹಿಳೆ, ಬಲಚಿತ್ರದಲ್ಲಿ ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಾಂದರ್ಭಿಕ ಚಿತ್ರ

ಕೊಪ್ಪಳ: ರಾಯಚೂರಿನಲ್ಲಿ ಕೆಲ ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ಮೃತಪಟ್ಟ ದುರ್ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಈಗ ಕೊಪ್ಪಳ ಜಿಲ್ಲೆಯ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 65 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಕಳೆದ ಸೋಮವಾರ ರಾತ್ರಿ ನಡೆದಿದೆ. 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಲುಷಿತ ನೀರು ಸೇವಿಸಿ ಓರ್ವ ವೃದ್ಧೆ ಮೃತಪಟ್ಟಿದ್ದು, ಮೃತ ಮಹಿಳೆಯನ್ನು ಹೊನ್ನಮ್ಮ ಶಿವಪ್ಪ (65ವ) ಎಂದು ಗುರುತಿಸಲಾಗಿದೆ. 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. 

ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಅಸ್ವಸ್ಥರ ದಾಖಲು: ಕಲುಷಿತ ನೀರು ಸೇವನೆಯಿಂದ ಬಸರಿಹಾಳ ಗ್ರಾಮದ ಜನರು ಸುಮಾರು ಮೂರು ದಿನಗಳಿಂದ ವಾಂತಿ- ಬೇದಿಯಿಂದ ಬಳಲುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಗ್ರಾಮಸ್ಥರ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಸ್ವಸ್ಥರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲುಷಿತ ನೀರು ಪೂರೈಕೆ ಮಾಡಿದ ಗ್ರಾಮ ಪಂಚಾಯತ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. 

ಮಹಿಳೆ ಸಾವಿನ ಬಳಿಕ ದಿನದಿಂದ ದಿನಕ್ಕೆ ಗ್ರಾಮದಲ್ಲಿ ಅಸ್ವಸ್ಥಗೊಳ್ಳುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆ ವೃದ್ಧೆ ಮೃತಪಟ್ಟಿದ್ದರೂ, ಆರೋಗ್ಯ ಇಲಾಖೆಯಾಗಲೀ ಅಥವಾ ಜಿಲ್ಲಾಡಳಿತದ ಅಧಿಕಾರಿಗಳಲೀ ಇಲ್ಲಿಗೆ ಬಂದು ಪರಿಶೀಲನೆ ಮಾಡಿ ಸ್ಥಳೀಯ ಅಧಿಕಾರಿಗಳ ಮೇಲೆ ಕ್ರಮವಹಿಸಿಲ್ಲ. ಜೊತೆಗೆ, ಗ್ರಾಮಕ್ಕೆ ಶುದ್ಧ ಕುಡಿಯುವ ಪೂರೈಕೆಗೂ ವ್ಯವಸ್ಥೆ ಮಾಡಿಲ್ಲ. ಇನ್ನು ಅಸ್ವಸ್ಥಗೊಂಡವರ ಪ್ರಕರಣ ಹೆಚ್ಚಾಗುತ್ತಿದ್ದಂತೆ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದ್ದು, ಸರ್ಕಾರಿ ಆಸ್ಪತ್ರೆಗಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತಿದೆ. ಅಸ್ವಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಪ್ರಕರಣ ತೀವ್ರ ಸ್ವರೂಪ ಬೆಳಕಿಗೆ ಬಂದಿದೆ. ಆದರೂ, ಆರೋಗ್ಯ ಇಲಾಖೆಯ ಗಮನಕ್ಕೆ ತಾರದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com