ಗರ್ಲ್‌ಫ್ರೆಂಡ್ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ; ದೆಹಲಿ ಯುವಕನ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸರು

ತನ್ನ ಗರ್ಲ್‌ಫ್ರೆಂಡ್ ಅನ್ನು ಹತ್ಯೆಗೈದು, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ದೆಹಲಿ ಮೂಲದ ವ್ಯಕ್ತಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿನ ಜೀವನ್ ಭೀಮಾ ನಗರ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದಲ್ಲಿ ತನ್ನ ಗರ್ಲ್‌ಫ್ರೆಂಡ್ ಅನ್ನು ಹತ್ಯೆಗೈದು, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ದೆಹಲಿ ಮೂಲದ ವ್ಯಕ್ತಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

ಸೋಮವಾರ ರಾತ್ರಿ ಬೆಂಗಳೂರಿನ ಜೀವನ್ ಭೀಮಾ ನಗರ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

ಹೈದರಾಬಾದ್ ಮೂಲದ ಆಕಾಂಕ್ಷಾ ವಿದ್ಯಾಸಾಗರ್ (23) ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಆರೋಪಿಯನ್ನು ದೆಹಲಿ ಮೂಲದ ಅರ್ಪಿತ್ ಎಂದು ಗುರುತಿಸಲಾಗಿದೆ.

ಇಬ್ಬರೂ ಸ್ವಲ್ಪ ಕಾಲ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿದ್ದವು. ಇಬ್ಬರು ಜಗಳವಾಡಿದ್ದರು ಮತ್ತು ಪ್ರತ್ಯೇಕಗೊಳ್ಳಲು ನಿರ್ಧರಿಸಿದ್ದರು. ಸೋಮವಾರ ಸಂಜೆ ಇಬ್ಬರ ನಡುವೆ ನಡೆದ ಜಗಳ ಹಿಂಸಾಚಾರಕ್ಕೆ ತಿರುಗಿದ್ದು, ಕೋಪದ ಭರಾಟೆಯಲ್ಲಿ ಅರ್ಪಿತ್ ಆಕಾಂಕ್ಷಾಳನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮಂಗಳವಾರ ಹೇಳಿಕೆ ನೀಡಿರುವ ಹೆಚ್ಚುವರಿ ಕಮಿಷನರ್ (ಪೂರ್ವ) ಎಂ.ಚಂದ್ರಶೇಖರ್, ಆಕಾಂಕ್ಷಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಆಕೆಯ ಸ್ನೇಹಿತೆಯ ಪಾತ್ರದ ಬಗ್ಗೆ ನಮಗೆ ಶಂಕೆ ಇದೆ. ಆರೋಪಿಯನ್ನು ಬಂಧಿಸಲು ಪೊಲೀಸರ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಆರೋಪಿ ಕೊಲೆ ಮಾಡಿದ ನಂತರ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮುಂದಾಗಿದ್ದ. ಆಕಾಂಕ್ಷಳನ್ನು ಕೊಂದ ನಂತರ ಆಕೆಯನ್ನು ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಲು ಯತ್ನಿಸಿದ. ಆದರೆ, ವಿಫಲವಾಗಿದೆ ಎಂದು ಚಂದ್ರಶೇಖರ್ ಹೇಳಿದರು.

ಪೊಲೀಸರ ಪ್ರಕಾರ, ಶವವನ್ನು ನೇಣು ಹಾಕಲು ಪ್ರಯತ್ನ ಮಾಡಿದ ನಂತರ ಅರ್ಪಿತ್ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ ಪಾಳಿಯ ನಂತರ ಮತ್ತೊಬ್ಬ ರೂಂಮೇಟ್ ಮನೆಗೆ ಬಂದ ನಂತರ ಘಟನೆ ಬೆಳಕಿಗೆ ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com