ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸೇರಿ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್ ವಿದ್ಯುತ್ ಉಚಿತ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸೇರಿ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.
Published: 06th June 2023 11:55 AM | Last Updated: 06th June 2023 08:14 PM | A+A A-

ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸೇರಿ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆದಾರರಿಗೂ ಗೃಹ ಜ್ಯೋತಿ ಸಿಗಲಿದೆ. 200 ಯುನಿಟ್ ಒಳಗೆ ಉಪಯೋಗ ಮಾಡುವ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯ ಆಗುತ್ತದೆ. ಕಮರ್ಷಿಯಲ್ ಅವರಿಗೆ ಯೋಜನೆ ಅನ್ವಯ ಇಲ್ಲ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬೇರಾವುದೇ ವಿಷಯಗಳು ಅವರಿಗೆ ಸಿಕ್ಕಿಲ್ಲ. ಹೀಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಅವರಿಗೆ ಯಾವ ನೈತಿಕತೆ ಇದೆ ಪ್ರತಿಭಟನೆ ಮಾಡೋಕೆ?. ಬಿಜೆಪಿ ಅವರು 10 ಗಂಟೆ ವಿದ್ಯುತ್ ಕೊಡುತ್ತೇವೆಂದು ಹೇಳಿದ್ದರು, ಕೊಟ್ಟರೇ? ಸಾಲಮನ್ನಾ ಮಾಡುತ್ತೇವೆಂದು ಹೇಳಿದ್ದರು. ಮಾಡಿದರೇ? ನೀರಾವರಿಗೆ 1.5 ಲಕ್ಷ ಕೋಟಿ ಖರ್ಚು ಮಾಡುತ್ತೇವೆಂದು ಹೇಳಿದ್ದರು. ಮಾಡಿದರೇ? ಹೀಗಿರುವಾಗ ನಮ್ಮನ್ನ ಪ್ರಶ್ನೆ ಮಾಡೋಕೆ ಇವರಿಗೆ ನೈತಿಕತೆ ಇದೆಯಾ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸರ್ಕಾರದ 'ಗೃಹ ಜ್ಯೋತಿ' ಯೋಜನೆಗೆ ಅರ್ಹರು: ಇಂಧನ ಸಚಿವ ಕೆ ಜೆ ಜಾರ್ಜ್
ಬಿಜೆಪಿ ಅವರು ಹೇಳಿದ್ದು ಮಾಡಲಿಲ್ಲ. ನಾವು ಹೇಳಿದ್ದು ಮಾಡಿದ್ದೇವೆ. ಇದೀಗ ಮೊಸರಲ್ಲಿ ಕಲ್ಲು ಹುಡುಕೋಕೆ ಹೊರಟಿದ್ದಾರೆ. ಬಿಜೆಪಿ ಜನ ವಿರೋಧಿ ಪಕ್ಷ. ಅವರು ಅಧಿಕಾರದಲ್ಲಿ ಇದ್ದಾಗ ಲೂಟಿ ಹೊಡೆದು, ಲಂಚ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರು ಕೊಟ್ಟು ಹೋದರು. ಈಗ ನಮಗೆ ಪಾಠ ಹೇಳಿ ಕೊಡುತ್ತಾರೆ. ಇದಕ್ಕೆ ಏನು ಹೇಳೋಣ.
ಬಿಜೆಪಿ ಅವರು ಕೊಟ್ಟ ಎಷ್ಟು ಭರವಸೆ ಈಡೇರಿಸಿದ್ದಾರೆಂದು ಹೇಳಲಿ. ನಾವು ಬಂದ 15 ದಿನಗಳ ಒಳಗೆ 5 ಗ್ಯಾರಂಟಿ ಜಾರಿ ಮಾಡಿದ್ದೇವೆ. ಹಿಂದೆ ನಾನು ಸಿಎಂ ಆಗಿದ್ದಾಗ ಕೊಟ್ಟಿದ್ದ 165 ಭರವಸೆ ಪೈಕಿ 158 ಭರವಸೆ ಈಡೇರಿಸಿದ್ದೇನೆ. ಇಂದಿರಾ ಕ್ಯಾಂಟಿನ್ ನಿಲ್ಲಿಸಿದ್ದು ಯಾರು? ಕೃಷಿ ಭಾಗ್ಯ ನಿಲ್ಲಿಸಿದ್ದು ಯಾರು? ಪಶು ಭಾಗ್ಯ, ಶೂ ಭಾಗ್ಯ ನಿಲ್ಲಿಸಿದ್ದು ಯಾರು? ಸೈಕಲ್ ನಿಲ್ಲಿಸಿದ್ದು ಯಾರು ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದರು.