
ವಿಧಾನಸೌಧ
ಬೆಂಗಳೂರು: ಹಿರಿಯ ಅಧಿಕಾರಿ ಮಂಜುನಾಥ್ ಪ್ರಸಾದ್ ಸೇರಿದಂತೆ 11 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ, ಐಎಎಸ್ ಅಧಿಕಾರಿ ಉಮಾಶಂಕರ್ ಎಸ್ ಆರ್ ಅವರನ್ನು ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಯಿಂದ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಉಮಾಶಂಕರ್ ಅವರ ವರ್ಗಾವಣೆಯಿಂದ ತೆರವಾದ ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಮಂಜುನಾಥ ಪ್ರಸಾದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಇದನ್ನು ಓದಿ: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕ್ಕುಮಾರ್ ಅವರನ್ನು ಬೆಂಗಳೂರಿನ ಕೃಷಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳ ಪಟ್ಟಿ
ಕಪಿಲ್ ಮೋಹನ್- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರವಾಸೋದ್ಯಮ
ಉಮಾಶಂಕರ್- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ
ಮಂಜುನಾಥ್ ಪ್ರಸಾದ್- ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆ
ಅನ್ಬುಕುಮಾರ್- ಕಾರ್ಯದರ್ಶಿ, ಕೃಷಿ ಇಲಾಖೆ
ಮೋಹನ್ ರಾಜ್- ಕಾರ್ಯದರ್ಶಿ, ತೋಟಗಾರಿಕೆ ಇಲಾಖೆ
ರಿಚರ್ಡ್ ಡಿಸೋಜ- ಕಾರ್ಯದರ್ಶಿ, ಎಂಎಸ್ ಎಂಇ ಮತ್ತು ಮೈನ್ ಇಲಾಖೆ
ಗಿರೀಶ್- ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ
ಕರೇಗೌಡ- ಅಟಲ್ ಜನಸ್ನೇಹಿ ಕೇಂದ್ರ, ನಿರ್ದೇಶಕರು
ಪಾಟೀಲ್ ಯಲಗೌಡ ಶೀವನಗೌಡ- ಕೃಷಿ ಇಲಾಖೆ, ಆಯುಕ್ತ
ಜಗದೀಶ್- ಎಂಡಿ, ಪ್ರವಾಸೋದ್ಯಮ
ಡಾ. ಮಹೇಶ್- ಸಿ ಇಒ, ಕೆಐಎಡಿಬಿ