ಅನೈತಿಕ ಸಂಬಂಧ ಶಂಕೆ: ಪತ್ನಿಯ ಮರ್ಮಾಂಗಕ್ಕೆ ಇರಿದು ಬರ್ಬರ ಹತ್ಯೆ!
ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಚಾಕುವಿನಿಂದ ಆಕೆಯ ಜನನಾಂಗ ಸೇರಿದಂತೆ ದೇಹದ ಮೇಲೆ ಹಲವಾರು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಸವೇಶ್ವರನಗರ ಪೊಲೀಸ್ ವ್ಯಾಪ್ತಿಯ ಮಂಜುನಾಥನಗರದಲ್ಲಿ ನಡೆದಿದೆ.
Published: 06th June 2023 09:22 AM | Last Updated: 06th June 2023 08:03 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಚಾಕುವಿನಿಂದ ಆಕೆಯ ಜನನಾಂಗ ಸೇರಿದಂತೆ ದೇಹದ ಮೇಲೆ ಹಲವಾರು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಸವೇಶ್ವರನಗರ ಪೊಲೀಸ್ ವ್ಯಾಪ್ತಿಯ ಮಂಜುನಾಥನಗರದಲ್ಲಿ ನಡೆದಿದೆ.
ರಾಜಾಜಿನಗರದ ಗಾರ್ಮೆಂಟ್ಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನಾಗರತ್ನ (32) ಹತ್ಯೆಯಾದ ದುರ್ದೈವಿ. ಪ್ರಕರಣ ಸಂಬಂಧ ಸಿಟಿ ಮಾರ್ಕೆಟ್‌ನಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಆಕೆಯ ಪತಿ ಅಯ್ಯಪ್ಪ (35) ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ನಾಗರತ್ನ ಅನಾಥೆಯಾಗಿದ್ದು, ಸುಮಾರು 11 ವರ್ಷಗಳ ಆರೋಪಿ ಇವರನ್ನು ವಿವಾಹವಾಗಿದ್ದ. ದಂಪತಿಗೆ 11 ವರ್ಷದ ಬಾಲಕ ಮತ್ತು ಏಳು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಮಕ್ಕಳಿದ್ದಾರೆ. ಹತ್ಯೆಗೂ ಮುನ್ನ ಆರೋಪಿ ಮಕ್ಕಳನ್ನು ತನ್ನ ಸಹೋದರಿಯ ಮನೆಯಲ್ಲಿ ಬಿಟ್ಟು ಹೋಗಿದ್ದ ಎಂದು ತಿಳಿದುಬಂದಿದೆ.
ಈ ಹಿಂದೆ ದಂಪತಿಗಳು ಶಿವನಗರದ ಸಿದ್ದಗಂಗಾ ಶಾಲೆಯ ಬಳಿಯಿದ್ದ ಮನೆಯೊಂದರಲ್ಲಿ ವಾಸವಿದ್ದರು. 5 ತಿಂಗಳ ಹಿಂದಷ್ಟೇ ಮಂಜುನಾಥ ನಗರಕ್ಕೆ ಸ್ಥಳಾಂತರಗೊಂಡಿದ್ದರು.
ಪತ್ನಿಯ ಶೀಲ ಶಂಕಿಸುತ್ತಿದ್ದ ಆರೋಪಿ, ಆಗಾಗ್ಗೆ ಜಗಳಕ್ಕಿಳಿಯುತ್ತಿದ್ದ. ಕಳೆದ ಭಾನುವಾರ ರಾತ್ರಿ 8.20ರ ಸುಮಾರಿಗೆ ನಾಗರತ್ನ ಅವರು ಮಲಗಿದ್ದು, ಈ ವೇಳೆ ಆರೋಪಿ ಜಗಳಕ್ಕಿಳಿದಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿದ್ದು, ಆರೋಪಿ ಪತ್ನಿಯ ತಲೆಯನ್ನು ನೆಲಕ್ಕೆ ಬಡಿದಿದ್ದಾರೆ. ನಂತರ ಆಕೆಯ ಖಾಸಗಿ ಭಾಗಕ್ಕೆ ಅನೇಕ ಬಾರಿ ಚಾಕುವಿನಿಂದ ಇರಿದ್ದಾನೆ.
ಘಟನೆ ಬಗ್ಗೆ ಮಾಹಿತಿ ಪಡೆದ ಬಸವೇಶ್ವರನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.