ನಗರದಲ್ಲಿ ಶೀಘ್ರದಲ್ಲೇ ನೀರಿನ ದರ ಏರಿಕೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರು ಬಳಕೆ ಶುಲ್ಕ ಏರಿಕೆಯಾಗುವ ಎಲ್ಲಾ ಬೆಳವಣಿಗೆಗಳು ಕಂಡು ಬರುತ್ತಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರು ಬಳಕೆ ಶುಲ್ಕ ಏರಿಕೆಯಾಗುವ ಎಲ್ಲಾ ಬೆಳವಣಿಗೆಗಳು ಕಂಡು ಬರುತ್ತಿವೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ನಿನ್ನೆ ಸಂಜೆ ಕೇವೇರಿ ಭವನಕ್ಕೆ ಭೇಟಿ ನೀಡಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೈಗೊಂಡಿರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಜಲಮಂಡಳಿ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಕುರಿತು ಅಧಿಕಾರಿಗಳು ಡಿಸಿಎಂಗೆ ವಿವರಿಸಿದ್ದಾರೆ. 2014ರಿಂದಲೂ ನೀರಿನ ದರ ಪರಿಷ್ಕರಣೆ ಮಾಡಲಾಗಿಲ್ಲ. ಜಲಮಂಡಳಿ ಬಳಿ ಸಿಬ್ಬಂದಿ, ಅಧಿಕಾರಿಗಳಿಗೆ ವೇತನ ನೀಡಲೂ ಹಣವಿಲ್ಲದಂತಾಗಿದೆ ಎಂದು ಅಳಲು ತೋಡಿಕೊಂಡರು.

ಜಲಮಂಡಳಿಗೆ ಪ್ರತೀ ತಿಂಗಳು ಮಾಸಿಕ 110 ಕೋಟಿ ಆದಾಯವನ್ನು ಬರುತ್ತಿದೆ, ಆದರೆ, ಮಾಸಿಕ ವೆಚ್ಚವೇ  ಸುಮಾರು 140 ಕೋಟಿ ರೂ ಆಗುತ್ತಿದೆ. ವಿದ್ಯುತ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ಶುಲ್ಕಕ್ಕಾಗಿ 90 ಕೋಟಿ ರೂ ನೀಡಲಾಗುತ್ತಿದೆ. ವಿದ್ಯುತ್ ದರದಲ್ಲಿ ವಾರ್ಷಿಕ ಹೆಚ್ಚಳವಾಗಿದ್ದರೂ, ನೀರಿನ ದರವು 2014 ರಿಂದ ಒಂದೇ ಇದೆ. ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಇದಕ್ಕೆ ಸರ್ಕಾರದ ಒಪ್ಪಿಗೆಯಷ್ಟೇ ಬಾಕಿಯಿದೆ ಎಂದು ಬಿಡಬ್ಲ್ಯೂಎಸ್ಎಸ್'ಬಿ ಅಧ್ಯಕ್ಷ ಜಯರಾಮ್ ಅವರು ಹೇಳಿದರು.

ಈ ವೇಳೆ ಅಧಿಕಾರಿಗಳ ಆಳಲನ್ನು ಆಲಿಸಿದ ಡಿಕೆ.ಶಿವಕುಮಾರ್ ಅವರು, ಪ್ರಸ್ತಾಪವನೆ ಪರಿಶೀಲಿಸುವ ಭರವಸೆ ನೀಡಿದರು.

ಕಳೆದ 9 ವರ್ಷಗಳಲ್ಲಿ ವಿದ್ಯುತ್ ದರದಲ್ಲಿ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ನಗರವು ಪ್ರಸ್ತುತ ದಿನಕ್ಕೆ 1,450 ಮಿಲಿಯನ್ ಲೀಟರ್ ನೀರನ್ನು (ಎಂಎಲ್‌ಡಿ) ಪಡೆಯುತ್ತಿದೆ. ಕಾವೇರಿ 5ನೇ ಹಂತದ ನೀರು ಸರಬರಾಜು ಯೋಜನೆ ಪೂರ್ಣಗೊಂಡಿದ್ದೇ ಆದರೆ, ಇನ್ನೂ 775 ಎಂಎಲ್‌ಡಿ ನೀರು ಲಭಿಸಲಿದೆ ಎಂದು ಜಯರಾಮ್ ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com