ಹೊಸಕೆರೆಹಳ್ಳಿ ಕೆರೆ ಮಧ್ಯೆ ಅಕ್ರಮ ರಸ್ತೆ ನಿರ್ಮಾಣ: ತನಿಖೆ ನಡೆಸಲಾಗುವುದು ಎಂದ ಬಿಬಿಎಂಪಿ ಆಯುಕ್ತ

ಹೊಸಕೆರೆಹಳ್ಳಿ ಕೆರೆ ಮಧ್ಯೆ ಅಕ್ರಮ ರಸ್ತೆ ನಿರ್ಮಾಣ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿರುವ ಕುರಿತು ತನಿಖೆ ನಡೆಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹೊಸಕೆರೆಹಳ್ಳಿ ಕೆರೆ ಮಧ್ಯೆ ಅಕ್ರಮ ರಸ್ತೆ ನಿರ್ಮಾಣ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿರುವ ಕುರಿತು ತನಿಖೆ ನಡೆಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಅಲ್ಲದೆ, ಸಮಸ್ಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

''ಕೆರೆಯ ಮಧ್ಯ ಭಾಗದಲ್ಲಿ ರ್ಯಾಂಪ್ ಮಾದರಿಯ ರಸ್ತೆಯ ಅಗತ್ಯವಿರಲಿಲ್ಲ, ಇದು ಕೆರೆಯ ಪರಿಸರದ ಮೇಲೆ ಪರಿಣಾಮ ಬೀರಿದೆ. ಟ್ಯಾಂಕ್ ಅಭಿವೃದ್ಧಿ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆಯಲಾಗಿಲ್ಲ, ಆದ್ದರಿಂದ ವಿಶೇಷ ಆಯುಕ್ತ ಪಿ.ಎನ್.ರವೀಂದ್ರ ಅವರ ವರದಿಯನ್ನು ಆಧರಿಸಿ ಅಧಿಕಾರಿಗಳ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.

ರಸ್ತೆ ನಿರ್ಮಾಮ ಕುರಿತು ಈಗಾಗಲೇ ವರದಿ ಸಿದ್ಧಪಡಿಸಲಾಗಿದೆ. ಚನಾವಣೆ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಇದೀಗ ವರದಿ ಸಲ್ಲಿಸಲಾಗಿದೆ ಎಂದರು.

ಕೆರೆಯ ಮಧ್ಯೆ ರಸ್ತೆ ಕಾಮಗಾರಿಗೆ ಶಾಸಕ ಮುನಿರತ್ನ ಒತ್ತಡ ಹೇರಿದ್ದಾರೆ ಎನ್ನಲಾದ ಪ್ರಶ್ನೆಗೆ ಉತ್ತರಿಸಿ ಅವರು, ಈ ಕುರಿತು ನನಗೆ ಮಾಹಿತಿಲ್ಲ ಎಂದು ಹೇಳಿದರು.

ಪಾಲಿಕೆ ಮೂಲಗಳ ಪ್ರಕಾರ, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಬಿಬಿಎಂಪಿ ಉನ್ನತಾಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಉಪಮುಖ್ಯಮಂತ್ರಿಗಳ ಸೂಚನೆ ಬಳಿಕ ಅಕ್ರಮ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೆರೆ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಎಚ್.ಎಸ್.ಮೇಗಾ ಮತ್ತು ಸಹಾಯಕ ಎಂಜಿನಿಯರ್ (ಕೆರೆ) ಶಿಲ್ಪಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com