ನೈತಿಕ ಪೊಲೀಸ್‌ಗಿರಿ ಸಂತ್ರಸ್ತನ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಹಲ್ಲೆ; ಪೊಲೀಸ್ ಆಯುಕ್ತರಿಗೆ ದೂರು
ಇತ್ತೀಚೆಗಷ್ಟೇ ಸೋಮೇಶ್ವರ ಬೀಚ್‌ನಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಗೆ ಬಲಿಯಾದ ವಿದ್ಯಾರ್ಥಿಯೊಬ್ಬರು ತಮ್ಮ ಮೇಲೆ ಉಳ್ಳಾಲ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
Published: 07th June 2023 11:05 AM | Last Updated: 07th June 2023 11:05 AM | A+A A-

ಸಾಂದರ್ಭಿಕ ಚಿತ್ರ
ಮಂಗಳೂರು: ಇತ್ತೀಚೆಗಷ್ಟೇ ಸೋಮೇಶ್ವರ ಬೀಚ್‌ನಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಗೆ ಬಲಿಯಾದ ವಿದ್ಯಾರ್ಥಿಯೊಬ್ಬರು ತಮ್ಮ ಮೇಲೆ ಉಳ್ಳಾಲ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿಯೊಬ್ಬರು ದೂರು ನೀಡಿರುವುದನ್ನು ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ಖಚಿತಪಡಿಸಿದ್ದಾರೆ.
'ನಾವು ಈ ದೂರನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸುವಂತೆ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ)ಗೆ ಕೇಳಿದ್ದೇನೆ. ಪೊಲೀಸ್ ಠಾಣೆ ಸಿಬ್ಬಂದಿ ತಪ್ಪಿತಸ್ಥರೆಂದು ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು' ಎಂದರು.
ಸ್ಥಳೀಯರು ತನ್ನ ಮೇಲೆ ಹಲ್ಲೆ ನಡೆಸಿದ ನಂತರ ಸಬ್ ಇನ್ಸ್‌ಪೆಕ್ಟರ್ ತನ್ನನ್ನು ಠಾಣೆಗೆ ಕರೆಸಿ ಖಾಲಿ ಕಾಗದದ ಮೇಲೆ ಸಹಿ ಪಡೆದಿದ್ದಾರೆ. ಈ ಕೃತ್ಯವನ್ನು ಪ್ರಶ್ನಿಸಿದಾಗ ಅಧಿಕಾರಿ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿ ತನ್ನ ದೂರಿನಲ್ಲಿ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಂಗಳೂರು: ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ; ಅಪ್ರಾಪ್ತ ಸೇರಿದಂತೆ ಐದು ಮಂದಿ ಬಂಧನ
ನಗರದ ಪ್ಯಾರಾ ಮೆಡಿಕಲ್ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಜೂನ್ 1 ರಂದು ಸಂಜೆ ತಮ್ಮ ಕಾಲೇಜು ಮೇಟ್‌ಗಳಾದ ಮೂವರು ಹುಡುಗರೊಂದಿಗೆ ಸೋಮೇಶ್ವರ ಬೀಚ್‌ಗೆ ಹೋಗಿದ್ದರು.
ಬೇರೆ ಸಮುದಾಯದ ವಿದ್ಯಾರ್ಥಿಗಳು ಯುವತಿಯರ ಜೊತೆ ಇರುವುದನ್ನು ಕಂಡ ಸ್ಥಳೀಯ ಕೆಲ ಯುವಕರು ಆಕ್ಷೇಪಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.