ಪಾಲಿಕೆ ಸಿಬ್ಬಂದಿ, ಅಧಿಕಾರಿಗಳ ವರ್ಗಾವಣೆಗೆ ಬಿಬಿಎಂಪಿ ಮುಂದು!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒಂದೇ ವಾರ್ಡ್ ಮತ್ತು ಇಲಾಖೆಯಲ್ಲಿ ದೀರ್ಘಕಾಲದಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ನಿರ್ಧಾರಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ...
ತುಷಾರ್ ಗಿರಿನಾಥ್
ತುಷಾರ್ ಗಿರಿನಾಥ್

ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒಂದೇ ವಾರ್ಡ್ ಮತ್ತು ಇಲಾಖೆಯಲ್ಲಿ ದೀರ್ಘಕಾಲದಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ನಿರ್ಧಾರಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಗಾವಣೆ ಸಂಬಂಧ ಹೊಸ ಮಾರ್ಗಸೂಚಿ ಸಿದ್ಧಪಡಿಸಲಾಗಿದ್ದು, ಸರ್ಕಾರದ ಅನುಮೋದನೆಗ ರವಾನಿಸಲಾಗಿದೆ. ಸರ್ಕಾರ ಒಪ್ಪಿಗೆ ಸೂಚಿಸುತ್ತಿದ್ದಂತೆಯೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದರು.

ಬಿಬಿಎಂಪಿ ಸಿಬ್ಬಂದಿ ಮತ್ತು ಅಧಿಕಾರಿಗಳ ವರ್ಗಾವಣೆಗೆ ಪ್ರತ್ಯೇಕ ಮಾರ್ಗಸೂಚಿಗಳ ಅಗತ್ಯವಿದೆ. ಹೀಗಾಗಿ 2021ರ ಮಾರ್ಗಸೂಚಿಗೆ ಅನುಮೋದನೆ ನೀಡುವಂತೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವರ್ಗಾವಣೆಗೆ ಸಂಬಂಧಿಸಿದಂತೆ ಪ್ರಸ್ತುತ ಮಾರ್ಗಸೂಚಿಗಳು ಹಳೆಯದಾಗಿವೆ. ''ಹಲವು ವರ್ಷಗಳಿಂದ ಒಂದೇ ವಾರ್ಡ್‌ಗಳ ಜನರೊಂದಿಗೆ ಸಂಪರ್ಕದಲ್ಲಿರುವ ಅಧಿಕಾರಿಗಳನ್ನು ಬದಲಾಯಿಸಬೇಕು. ಅದರಲ್ಲೂ ಎ,ಬಿ,ಸಿ ಗ್ರೂಪ್‌ಗಳ ಅಧಿಕಾರಿಗಳ ಬದಲಾವಣೆ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ 2021ರ ಹೊಸ ಮಾರ್ಗಸೂಚಿ ಅನುಷ್ಠಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎಂದು ತಿಳಿಸಿದರು.

‘ಚಿಲುಮೆ’ ಎಂಬ ಎನ್‌ಜಿಒಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಿಸಲು ಗಿರಿನಾಥ್‌ ಅನುಮತಿ ನೀಡಿದ್ದಾರೆ ಎಂಬ ಕಾಂಗ್ರೆಸ್‌ ಮುಖಂಡ ರಮೇಶ್‌ಬಾಬು ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ತನಿಖೆ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ಬೆಂಗಳೂರಿನಲ್ಲಿ ಜಿಲ್ಲಾ ಚುನಾವಣಾಧಿಕಾರಿಯಾಗಿ ಪಾರದರ್ಶಕವಾಗಿ ಕೆಲಸ ನಿರ್ವಹಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com