ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ.
Published: 07th June 2023 08:40 AM | Last Updated: 07th June 2023 12:23 PM | A+A A-

ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ.
ಕಳೆದ ವರ್ಷ ಜು.23 ಮತ್ತು 24ರಂದು ನಡೆದ ಸಹಾಯಕ ಸರಕಾರಿ ಅಭಿಯೋಜಕರು, ಸಹಾಯಕ ಸರಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಅಕ್ರಮ ನಡೆದಿರುವ ಕುರಿತು ವ್ಯಾಪಕ ದೂರುಗಳು ಕೇಳಿಬಂದಿದ್ದವು.
ಇದನ್ನೂ ಓದಿ: ಹೊಸಕೆರೆಹಳ್ಳಿ ಕೆರೆ ಮಧ್ಯೆ ಅಕ್ರಮ ರಸ್ತೆ ನಿರ್ಮಾಣ: ತನಿಖೆ ನಡೆಸಲಾಗುವುದು ಎಂದ ಬಿಬಿಎಂಪಿ ಆಯುಕ್ತ
ಈ ಸಂಬಂಧ ಸಲ್ಲಿಸಿದ್ದ ದೂರುಗಳನ್ನು ಆಧಾರಿಸಿ ಕೂಡಲೇ ನಿರ್ದಾಕ್ಷಿಣ್ಯವಾದ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನದೊಳಗೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ.