ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಜಾತಿಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಲಿದೆ: ಸಿಎಂ ಸಿದ್ದರಾಮಯ್ಯ

‘ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ (ಜಾತಿಗಣತಿ) ವರದಿಯನ್ನು ಸರ್ಕಾರ ಸ್ವೀಕರಿಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ‘ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ (ಜಾತಿಗಣತಿ) ವರದಿಯನ್ನು ಸರ್ಕಾರ ಸ್ವೀಕರಿಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಕೆ.ಎಂ.ರಾಮಚಂದ್ರಪ್ಪ ನೇತೃತ್ವದಲ್ಲಿ ವಿವಿಧ ಜಾತಿಗಳಿಗೆ ಸೇರಿದ ವಿವಿಧ ಸಂಘಗಳ 150ಕ್ಕೂ ಹೆಚ್ಚು ಪ್ರತಿನಿಧಿಗಳು ಬುಧವಾರ ಸಿಎಂ ಅವರನ್ನು ಭೇಟಿ ಮಾಡಿದರು.

ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ-ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಲಿದ್ದು, ಅಂಕಿಅಂಶಗಳ ಆಧಾರದ ಮೇಲೆ ವಿವಿಧ ಸಮುದಾಯಗಳಿಗೆ ಸೌಲಭ್ಯಗಳನ್ನು ನೀಡಲಾಗುವುದು ಎಂದು ಹೇಳಿದರು.

ವೈಜ್ಞಾನಿಕ ಮತ್ತು ನಿಖರವಾದ ಮಾಹಿತಿ ಪಡೆಯಲು ಸಮೀಕ್ಷೆ ನಡೆಸಲಾಗಿದ್ದು, ಮೀಸಲಾತಿ ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ಇದು ಅವಶ್ಯಕವಾಗಿದೆ. ಸಾಮಾಜಿಕ-ಆರ್ಥಿಕ ಸಮೀಕ್ಷೆ ಅಥವಾ ಜಾತಿ ಗಣತಿಯು ಜನರಿಗೆ ಒದಗಿಸಬೇಕಾದ ಸೌಲಭ್ಯಗಳ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಗತ್ಯವಾದ ಸಮೀಕ್ಷೆ ಒದಗಿಸುತ್ತದೆ. ಬಿಜೆಪಿ ಸರ್ಕಾರ ಮೀಸಲಾತಿಯಲ್ಲಿ ಸೃಷ್ಟಿಸಿರುವ ಗೊಂದಲ ನಿವಾರಿಸಿ ಸಾಮಾಜಿಕ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.

ಚುನಾವಣೆಯ ಪೂರ್ವದಲ್ಲಿ, ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ತೆಗೆದುಹಾಕುವ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ವಿರೋಧಿಸಿತ್ತು ಮತ್ತು ಅಧಿಕಾರಕ್ಕೆ ಬಂದ ನಂತರ ಅದನ್ನು ಮರುಸ್ಥಾಪಿಸುವ ಭರವಸೆಯನ್ನು ನೀಡಿತ್ತು.

2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಿಂದ ಸಾಮಾಜಿಕ-ಆರ್ಥಿಕ ಸಮೀಕ್ಷಾ ವರದಿ ಅಥವಾ ಜಾತಿ ಗಣತಿ ಕಾರ್ಯ ನಡೆದಿದ್ದು, 162 ಕೋಟಿ ಖರ್ಚು ಮಾಡಿ ವರದಿ ಸಿದ್ಧಪಡಿಸಲಾಗಿದೆ. 2018ರಲ್ಲಿ ಕಾಂಗ್ರೆಸ್ ಸರಕಾರದ ಅಧಿಕಾರಾವಧಿ ಮುಗಿದಾಗ ವರದಿ ಸಿದ್ಧವಾಗಿರಲಿಲ್ಲ. ಹೀಗಾಗಿ ಅಂಗೀಕಾರ ಸಾಧ್ಯವಾಗಿರಲಿಲ್ಲ.

ಸಮೀಕ್ಷೆಯು ಜಾತಿಗಳ ಬಗ್ಗೆ ಎಲ್ಲಾ ವಿವರಗಳು, ಅವರ ಸಾಮಾಜಿಕ-ಆರ್ಥಿಕ ಸ್ಥಿತಿ, ಅವರ ಜೀವನ ಮಟ್ಟ ಮತ್ತು ಇತರ ವಿವರಗಳನ್ನು ಪಡೆದಿದ್ದು, ಜನಸಂಖ್ಯೆಯ ಆಧಾರದ ಮೇಲೆ ಸಮುದಾಯಗಳಿಗೆ ಪ್ರಾತಿನಿಧ್ಯ ಮತ್ತು ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

Related Stories

No stories found.

Advertisement

X
Kannada Prabha
www.kannadaprabha.com