ಕೇರಳಕ್ಕೆ ಮುಂಗಾರು ಪ್ರವೇಶ: ಬೆಂಗಳೂರು ಸೇರಿ ರಾಜ್ಯಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ
ಒಂದು ವಾರ ತಡವಾಗಿ ಕೇರಳಕ್ಕೆ ಮಾನ್ಸೂನ್ ಮಾರುತಗಳು ಪ್ರವೇಶ ಮಾಡಿದ್ದು, ಪರಿಣಾಮ ರಾಜ್ಯದಲ್ಲೂ ಮಳೆ ಪ್ರಭಾವ ಜೊರಾಗಿರಲಿದೆ. ಪ್ರಮುಖವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Published: 09th June 2023 09:38 AM | Last Updated: 09th June 2023 07:05 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಒಂದು ವಾರ ತಡವಾಗಿ ಕೇರಳಕ್ಕೆ ಮಾನ್ಸೂನ್ ಮಾರುತಗಳು ಪ್ರವೇಶ ಮಾಡಿದ್ದು, ಪರಿಣಾಮ ರಾಜ್ಯದಲ್ಲೂ ಮಳೆ ಪ್ರಭಾವ ಜೊರಾಗಿರಲಿದೆ. ಪ್ರಮುಖವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಹಿಂದೆ ಹವಾಮಾನ ಇಲಾಖೆ ರಾಜ್ಯದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ ನೀಡಿದ್ದರೂ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಕೋಲಾರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದ ಜೂನ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಎಚ್ಚರಿಸಿದೆ.
ಇದನ್ನೂ ಓದಿ: ವಾರದ ಬಳಿಕ ಕೊನೆಗೂ ಕೇರಳಕ್ಕೆ ಅಪ್ಪಳಿಸಿದ ಮುಂಗಾರು.. ಜೂನ್ 10 ಅಥವಾ 11ರಂದು ಕರ್ನಾಟಕಕ್ಕೆ ಮಾನ್ಸೂನ್ ಪ್ರವೇಶ
ಜೂನ್ ನಿಂದ ಸೆಪ್ಟೆಂಬರ್ ವರೆಗೆ ಕರ್ನಾಟಕದಲ್ಲಿ ಮಳೆಯ ಮುನ್ಸೂಚನೆ 83 ಸೆಂ.ಮೀ. ಜೂನ್‌ನಲ್ಲಿ ಬೆಂಗಳೂರಿನಲ್ಲಿ 11 ಸೆಂ.ಮೀ ಮಳೆಯಾಗುವ ಸಾಧ್ಯತೆ ಇದೆ. ಇಡೀ ಋತುವಿನಲ್ಲಿ ಬೆಂಗಳೂರಿನಲ್ಲಿ 60 ಸೆಂ.ಮೀ ಮಳೆಯಾಗುವ ಸಾಧ್ಯತೆಯಿದೆ. ಈ ಮಾನ್ಸೂನ್ ಅವಧಿಯಲ್ಲಿ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನೈಋತ್ಯ ಮಾನ್ಸೂನ್ ಕೃಷಿಗೆ ನಿರ್ಣಾಯಕವಾಗಿದೆ, ಏಕೆಂದರೆ ದೇಶದ 52% ರಷ್ಟು ಮಳೆಯ ಮೇಲೆ ಅವಲಂಬಿತವಾಗಿದೆ. ಚಂಡಮಾರುತದ ತೀವ್ರತೆಯ ಹಿನ್ನೆಲೆಯಲ್ಲಿ ಜೂನ್ 14 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ಮುಂದಿನ 36 ಗಂಟೆಗಳಲ್ಲಿ ಬೈಪಾರ್ಜಾಯ್ ಚಂಡಮಾರುತ ತೀವ್ರ: ಉತ್ತರ-ವಾಯುವ್ಯ ದಿಕ್ಕಿನತ್ತ ಚಲನೆ
ಇದಲ್ಲದೆ ಮುಂದಿನ 2-4 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಬಿಸಿಗಾಳಿ ಪರಿಸ್ಥಿತಿಗಳ ಬಗ್ಗೆಯೂ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ.