ನೆಲಮಂಗಲ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಒ!
ಜಮೀನಿನ ಖಾತೆ ವರ್ಗಾವಣೆಗೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
Published: 09th June 2023 01:00 AM | Last Updated: 09th June 2023 01:01 AM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಜಮೀನಿನ ಖಾತೆ ವರ್ಗಾವಣೆಗೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ನೆಲಮಂಗಲದ ಅಗಳಕುಪ್ಪೆ ಗ್ರಾಮ ಪಂಚಾಯಿತಿ ಪಿಡಿಒ ಜಮೀನು ಖಾತೆ ವರ್ಗಾವಣೆಗೆ ವಿಜಯನಗರದ ಶಿವಣ್ಣ ಎಂಬುವರಿಂದ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಿಡಿಒ ಎನ್.ನರಸಿಂಹಮೂರ್ತಿ 6 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅದರಲ್ಲಿ 2 ಲಕ್ಷ ರೂ.ಗಳನ್ನು ಮುಂಗಡವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತಾರ ಕೈಗೆ ಸಿಕ್ಕಿ ಬಿದ್ದಿದ್ದಾರೆ.ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.