ಭೀಕರ ರಸ್ತೆ ಅಪಘಾತ; ಬೈಕ್‌ಗೆ ಟ್ರಕ್ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಮೂವರು ಸಾವು
ಶುಕ್ರವಾರ ಮುಂಜಾನೆ ಬಾಗಲಕೋಟೆ ಜಿಲ್ಲೆಯಲ್ಲಿ ಬೈಕ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್ ಮಾದರ (39), ಶಾಂತವ್ವ ಕಟ್ಟಿಮನಿ (43) ಮತ್ತು ಮಾಂತವ್ವ ಮರಡಿ (75) ಮೃತರು.
Published: 09th June 2023 11:09 AM | Last Updated: 09th June 2023 07:08 PM | A+A A-

ಸಾಂದರ್ಭಿಕ ಚಿತ್ರ
ಬಾಗಲಕೋಟೆ: ಶುಕ್ರವಾರ ಮುಂಜಾನೆ ಬಾಗಲಕೋಟೆ ಜಿಲ್ಲೆಯಲ್ಲಿ ಬೈಕ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ.
ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್ ಮಾದರ (39), ಶಾಂತವ್ವ ಕಟ್ಟಿಮನಿ (43) ಮತ್ತು ಮಾಂತವ್ವ ಮರಡಿ (75) ಮೃತರು.
ಶ್ರೀಕಾಂತ್ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಮಹಿಳೆಯರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಪೊಲೀಸರ ಪ್ರಕಾರ, ಬೈಕ್‌ಗೆ ಡಿಕ್ಕಿ ಹೊಡೆಯುವ ಮೊದಲು ಟ್ರಕ್ ಅಮೀನಗಡ ಪಟ್ಟಣದ ಬಳಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಹೆದರಿ ಚಾಲಕ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಭೀಕರ ಅಪಘಾತ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು
ಇದಾಗಿ ಮೂರು ಕಿಲೋಮೀಟರ್ ಪ್ರಯಾಣಿಸಿದ ನಂತರ ಟ್ರಕ್ ಮತ್ತೆ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮೂವರು ಸವಾರರು ಸಾವಿಗೀಡಾಗಿದ್ದಾರೆ. ನಂತರ ಚಾಲಕ ನಿಯಂತ್ರಣ ಕಳೆದುಕೊಂಡು ವಾಹನ ಪಲ್ಟಿಯಾಗಿದೆ. ಅದೃಷ್ಟವಶಾತ್ ಆ ಸಮಯದಲ್ಲಿ ಬೇರೆ ಯಾವುದೇ ವಾಹನಗಳು ರಸ್ತೆಯಲ್ಲಿ ಇರಲಿಲ್ಲ.
ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಮೀನಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.