ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು: ಜಲ ಜೀವನ್ ಮಿಷನ್ ಪೈಪ್‌ಲೈನ್ ಕಾಮಗಾರಿಗೆ ಗ್ರಾಮಸ್ಥರ ಆರೋಪ

ಜಿಲ್ಲೆಯ ಬಸರಿಹಾಳ್ ಮತ್ತು ಬಿಚ್ಚಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 19 ತಿಂಗಳ ಮಗು ಹಾಗೂ 10 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಬಸರಿಹಾಳ್ ಗ್ರಾಮದ ಹೊನ್ನಮ್ಮ ಶಿವಪ್ಪ (65ವ) ಎಂಬ ವೃದ್ಧೆ ಮೃತಪಟ್ಟಿದ್ದು, ಕಳೆದ ನಾಲ್ಕು ದಿನಗಳಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 3ಕ್ಕೇರಿದೆ. 
ಕಲುಷಿತ ನೀರು ಸೇವಿಸಿ ಮೃತಪಟ್ಟ 10 ವರ್ಷದ ಬಾಲಕಿ
ಕಲುಷಿತ ನೀರು ಸೇವಿಸಿ ಮೃತಪಟ್ಟ 10 ವರ್ಷದ ಬಾಲಕಿ
Updated on

ಕೊಪ್ಪಳ: ಜಿಲ್ಲೆಯ ಬಸರಿಹಾಳ್ ಮತ್ತು ಬಿಚ್ಚಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 19 ತಿಂಗಳ ಮಗು ಹಾಗೂ 10 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಬಸರಿಹಾಳ್ ಗ್ರಾಮದ ಹೊನ್ನಮ್ಮ ಶಿವಪ್ಪ (65ವ) ಎಂಬ ವೃದ್ಧೆ ಮೃತಪಟ್ಟಿದ್ದು, ಕಳೆದ ನಾಲ್ಕು ದಿನಗಳಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 3ಕ್ಕೇರಿದೆ. 

ಮೊನ್ನೆ ಬುಧವಾರ ತಡರಾತ್ರಿ ನಿರ್ಮಲಾ ಬೆಳಗಲ್ ಎಂಬ 10 ವರ್ಷದ ಬಾಲಕಿ ಸಾವಿನ ವರದಿಯಾದ ಬಿಚ್ಕಲ್ ಗ್ರಾಮಕ್ಕೆ ಜಿಲ್ಲಾಡಳಿತದ ಅಧಿಕಾರಿಗಳು ದೌಡಾಯಿಸಿದ್ದಾರೆ. ನಿನ್ನೆ ಗುರುವಾರ ಬೆಳಗ್ಗೆ ಬಸರಿಹಾಳ್ ಗ್ರಾಮದಲ್ಲಿ 19 ತಿಂಗಳ ಮಗು ಮೃತಪಟ್ಟಿದೆ. ಘಟನೆ ನಡೆದಾಗ ನಿರ್ಮಲಾ ಅವರ ಪೋಷಕರು ಚಿಕ್ಕಮಗಳೂರಿನ ಕಾಫಿ ಎಸ್ಟೇಟ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಅವರ ಪುತ್ರಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದಳು. 

ಕಾಮಗಾರಿಗೆ ಗ್ರಾಮಸ್ಥರ ಆಕ್ರೋಶ: ಪ್ರಸ್ತುತ ನಡೆಯುತ್ತಿರುವ ಜಲ ಜೀವನ್ ಮಿಷನ್ ನೀರಿನ ಪೈಪ್‌ಲೈನ್ ಕಾಮಗಾರಿಯೇ ನೀರು ಕಲುಷಿತಗೊಳ್ಳಲು ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹಲವು ಕಡೆಗಳಲ್ಲಿ ವೃತ್ತಿಪರವಾಗಿ ಕಾಮಗಾರಿ ನಡೆಯದೆ ನೀರಿನ ಪೈಪ್‌ಲೈನ್‌ ಗೆ ಹಾನಿಯಾಗಿದೆ, ಎಲ್ಲೆಲ್ಲಿ ಪೈಪ್‌ಲೈನ್ ಒಡೆದು ಹೋಗಿದ್ದರೂ ಜಲ ಜೀವನ್ ಮಿಷನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ತಂಡಗಳು ಅದನ್ನು ಸರಿಪಡಿಸಬೇಕು, ಆದರೆ ಅವರು ಅದನ್ನು ಮಾಡುತ್ತಿಲ್ಲ, ಇದನ್ನು ಆಡಳಿತಾಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಜಿಲ್ಲೆಯಲ್ಲಿ ಇಂತಹ ನೀರು ಕಲುಷಿತ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ಬಿಚ್ಚಕಲ್ ಗ್ರಾಮಸ್ಥರು ಹೇಳುತ್ತಾರೆ. 

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಹಲವಾರು ಸಾವುಗಳು ಸಂಭವಿಸಿವೆ. ಜಿಲ್ಲಾಡಳಿತವು ಗ್ರಾಮಸ್ಥರು ಮತ್ತು ಪ್ರದೇಶಗಳನ್ನು ಗುರುತಿಸಿ ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಕಾರ್ಯಕರ್ತರು ಸಲಹೆ ನೀಡುತ್ತಾರೆ. ಮಾಲಿನ್ಯದ ದೂರುಗಳಿದ್ದರೆ, ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಕಾರ್ಯಕರ್ತರೊಬ್ಬರು ಹೇಳಿದರು.

ಆರೋಗ್ಯ ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಲು ಜಿಲ್ಲಾಡಳಿತ ಹಲವಾರು ಕ್ರಮಗಳನ್ನು ಪ್ರಾರಂಭಿಸಿದೆ. ಬಿಚ್ಕಲ್ ಗ್ರಾಮದಲ್ಲಿ 61 ಗ್ರಾಮಸ್ಥರಲ್ಲಿ ನೀರು ಕಲುಷಿತಗೊಂಡ ಲಕ್ಷಣಗಳು ಕಂಡುಬಂದಿದ್ದು, ಅವರಲ್ಲಿ 13 ರೋಗಿಗಳು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇತರರು ದೋಟಿಹಾಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (PHC) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೊಪ್ಪಳ ಜಿಪಂ ಸಿಇಒ ರಾಹುಲ್ ತಿಳಿಸಿದ್ದಾರೆ. 

ಮುಂದಿನ ಒಂದು ವಾರದವರೆಗೆ ಜಿಲ್ಲೆಯ ಎರಡೂ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದರು. ವೈದ್ಯಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರ ತಂಡ ಪೀಡಿತ ಗ್ರಾಮಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com