ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಮಹಿಳೆಗೆ ಗೃಹಲಕ್ಷ್ಮಿ ಯೋಜನೆ ಲಾಭ ಸಿಗಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ತೆರಿಗೆ ಪಾವತಿಸುವ ಕುಟುಂಬದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2,000 ರೂಪಾಯಿ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
Published: 09th June 2023 02:00 PM | Last Updated: 09th June 2023 07:20 PM | A+A A-

ಲಕ್ಷ್ನಿ ಹೆಬ್ಬಾಳ್ಕರ್
ಬೆಂಗಳೂರು: ತೆರಿಗೆ ಪಾವತಿಸುವ ಕುಟುಂಬದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2,000 ರೂಪಾಯಿ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ರೂಪಿಸಿರುವ ’ಗೃಹಲಕ್ಷ್ಮಿ‘ ನಿಯಮಗಳಲ್ಲಿ ಫಲಾನುಭವಿಯ ಪತಿ ತೆರಿಗೆ ಪಾವತಿದಾರರಾಗಿದ್ದರೆ ಮಹಿಳೆಗೆ ಯೋಜನೆಯ ಲಾಭ ಸಿಗುವುದಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಇಂತಹ 10 ಲಕ್ಷ ಮಹಿಳೆಯರು ಇದ್ದಾರೆ. ಅವರನ್ನೂ ಯೋಜನೆ ವ್ಯಾಪ್ತಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿನಂತಿಸಲಾಗಿದೆ. ಮುಂದಿನ ದಿನಗಳಲ್ಲಿ ಯೋಜನೆ ವಿಸ್ತರಿಸುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ: ಜಿಎಸ್'ಟಿ, ಐಟಿ ಪಾವತಿಸುವವರಿಗಿಲ್ಲ ಲಾಭ, ಷರತ್ತು ವಿಧಿಸಿದ ಸರ್ಕಾರ!
ಗೃಹಜ್ಯೋತಿಗೆ ಆ.1 ರಂದು ಕಲಬುರಗಿಯಲ್ಲಿ, ಗೃಹಲಕ್ಷ್ಮಿಗೆ ಆ.17 ಅಥವಾ 18ರಂದು ಬೆಳಗಾವಿ ಯಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಯೋಜನೆಗಳ ಅನುಷ್ಠಾನ ಕುರಿತು ಉನ್ನತಮಟ್ಟದ ಸಭೆ ನಡೆಸಿದ ನಂತರ ಅವರು ಮಾತನಾಡಿದರು.