ಮೈಸೂರಿನಲ್ಲಿ ಅನ್ನಭಾಗ್ಯ, ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಸಿಎಂ ಸಿದ್ದರಾಮಯ್ಯ

ಶೀಘ್ರವೇ ಮೈಸೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆ, ಬೆಳಗಾವಿ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಮೈಸೂರು: ಶೀಘ್ರವೇ ಮೈಸೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆ, ಬೆಳಗಾವಿ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಳೆ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡುತ್ತೇವೆ. ನಾಳೆಯಿಂದ ಮಹಿಳೆಯರು ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಮೈಸೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡುತ್ತೇವೆ. ಬೆಳಗಾವಿ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.

ನಂಜನಗೂಡು ತಾಲೂಕಿನ ಸುತ್ತೂರು ಹೆಲಿಪ್ಯಾಡ್​ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ವರುಣವನ್ನು ತಾಲೂಕು ಕೇಂದ್ರ ಮಾಡಬೇಕೆಂದು ಒತ್ತಾಯ ವಿಚಾರವಾಗಿ ಮಾತನಾಡಿದ ಅವರು, ತಾಲೂಕು ಕೇಂದ್ರ ಮಾಡಬೇಕೆಂದು ವರುಣ ಜನ ಕೇಳಿದರೇ ಮಾಡುತ್ತೇವೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರೇ ಮಾಡುವುದಿಲ್ಲ. ವರುಣವನ್ನು ತಾಲೂಕು ಮಾಡುತ್ತೇವೆ ಅಂತ ಬಿಜೆಪಿಯವರು ಹೇಳಿದ್ದರು. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಕೆಲಸ ಮಾಡಲಿಲ್ಲ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಸ್ವಕ್ಷೇತ್ರ ವರುಣಾಕ್ಕೆ ಇದೇ ಮೊದಲ ಬಾರಿಗೆ ತೆರಳಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯರಿಂದ ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ತಮ್ಮನ್ನು ಗೆಲ್ಲಿಸಿ ಮುಖ್ಯಮಂತ್ರಿಗಳನ್ನಾಗಿ ಮಾಡಿದ ಕ್ಷೇತ್ರದ ಜನತೆಗೆ ಸಿಎಂ ಇಂದು ಮಧ್ಯಾಹ್ನ ಭರ್ಜರಿ ಭೋಜನ ವ್ಯವಸ್ಥೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com