ಮೈಸೂರು: ಝೀರೋ ಟ್ರಾಫಿಕ್ ಮಾಡಿದ್ದಕ್ಕೆ ಪೊಲೀಸ್ ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದಕ್ಕೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published: 10th June 2023 06:47 PM | Last Updated: 10th June 2023 06:47 PM | A+A A-

ಸಿಎಂ ಸಿದ್ದರಾಮಯ್ಯ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದಕ್ಕೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ಏರ್‌ಪೋರ್ಟ್‌ನಿಂದ ಜಿಲ್ಲಾ ಪಂಚಾಯತ್ ಆವರಣಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಇದನ್ನು ಓದಿ: ಝೀರೋ ಟ್ರಾಫಿಕ್ ಜೊತೆಗೆ ಹಾರ-ತುರಾಯಿ, ಶಾಲಿನ ಸನ್ಮಾನವೂ ಬೇಡವೆಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಏಕೆ ಝೀರೋ ಟ್ರಾಫಿಕ್ ಮಾಡಿದ್ದೀರಿ? ನಿಮಗೆ ಗೊತ್ತಿದೆಯಾ? ಝೀರೋ ಟ್ರಾಫಿಕ್ ಬೇಡ ಅಂತಾ ಹೇಳಿದ್ದೆ. ಡೋಂಟ್ ಡೂ ದಟ್ ಎಂದು ಬಾನೋತ್ ಹಾಗೂ ಡಿಸಿಪಿ ಮುತ್ತುರಾಜ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಈ ವೇಳೆ ಬಾನೋತ್ ಅವರು ಸುಮ್ಮನೆ ಏನೂ ಮಾತನಾಡದೆ ನಿಂತಿದ್ದರು.
ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಗೆ ತಮ್ಮಿಂದಾಗು ಕಿರಿಕಿರಿಗಳನ್ನು ತಪ್ಪಿಸಲು ಬೆಂಗಳೂರು ನಗರದಲ್ಲಿ ಸಂಚರಿಸುವ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವುದು ಬೇಡ ಎಂದು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದರು.