ಸಿಎಂ ಆದ ಬಳಿಕ ಸ್ವಕ್ಷೇತ್ರಕ್ಕೆ ಸಿದ್ದರಾಮಯ್ಯ ಆಗಮನ: ಅದ್ದೂರಿ ಸ್ವಾಗತಕ್ಕೆ ಸಿದ್ಧತೆ, ಕೃತಜ್ಞತಾ ಸಮಾವೇಶ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭೂತಪೂರ್ವ ಗೆಲುವು ಸಾಧಿಸಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಒಂದು ತಿಂಗಳಾಗುತ್ತಾ ಬಂದಿದೆ. ಅವರು ರಾಜ್ಯದ ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸ್ವ ಕ್ಷೇತ್ರ ವರುಣಾಕ್ಕೆ ಇಂದು ಶನಿವಾರ ಆಗಮಿಸುತ್ತಿದ್ದಾರೆ.
Published: 10th June 2023 12:50 PM | Last Updated: 10th June 2023 12:50 PM | A+A A-

ಸಿಎಂ ಸಿದ್ದರಾಮಯ್ಯನವರಿಂದ ಕೃತಜ್ಞತಾ ಸಮಾವೇಶ
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭೂತಪೂರ್ವ ಗೆಲುವು ಸಾಧಿಸಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಒಂದು ತಿಂಗಳಾಗುತ್ತಾ ಬಂದಿದೆ. ಅವರು ರಾಜ್ಯದ ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸ್ವ ಕ್ಷೇತ್ರ ವರುಣಾಕ್ಕೆ ಇಂದು ಶನಿವಾರ ಆಗಮಿಸುತ್ತಿದ್ದಾರೆ.
ವರುಣಾ ಕ್ಷೇತ್ರದ ಜನರಿಗೆ ಸಿಎಂ ಸಿದ್ದರಾಮಯ್ಯರಿಂದ ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ವರುಣಾ ಮತದಾರರಿಗೆ ಇಂದು ಕೃತಜ್ಞತೆ ಸಲ್ಲಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಅದ್ದೂರಿ ಸ್ವಾಗತ ಕೋರಲು ವರುಣಾ ಸಜ್ಜಾಗಿದ್ದು, ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ್ದಾರೆ. ಇದೇ ವೇಳೆ ಸುತ್ತೂರು ಹೆಲಿಪ್ಯಾಡ್ಗೆ ತೆರಳಿ ಅಲ್ಲಿಂದ ವರುಣಾಗೆ ಭೇಟಿ ನೀಡಲಿದ್ದಾರೆ.
ನಂತರ ನಂಜನಗೂಡಿನ ಬಿಳಿಗೆರೆ ಬೋರೆಯಲ್ಲಿ ಕೃತಜ್ಞತಾ ಸಮಾವೇಶ ನಡೆಯಲಿದೆ. ಮಧ್ಯಾಹ್ನ ಕೃತಜ್ಞತಾ ಸಮಾರಂಭ ನಡೆಯಲಿದೆ.ನಂತರ 2.45ಕ್ಕೆ ಸುತ್ತೂರು ಮಠಕ್ಕೂ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆಯಲಿದ್ದಾರೆ. ಸಂಜೆ 4 ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಯಲಿದೆ. ಇಂದು ರಾತ್ರಿ ಮೈಸೂರಿನಲ್ಲೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಿ ನಾಳೆ ಬೆಳಗ್ಗೆ 10.20ಕ್ಕೆ ಬೆಂಗಳೂರಿನ ಹೆಚ್ ಎಎಲ್ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ.