ತುಮಕೂರಿನಲ್ಲಿ ದೇವೇಗೌಡರನ್ನು ಸೋಲಿಸಿದ್ದ ಸಿದ್ದರಾಮಯ್ಯ ಆಪ್ತ ಕೆ.ಎನ್.ರಾಜಣ್ಣಗೆ ಹಾಸನ ಉಸ್ತುವಾರಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ. 
ಸಿಎಂ ಸಿದ್ದರಾಮಯ್ಯ, ಕೆ ಎನ್ ರಾಜಣ್ಣ
ಸಿಎಂ ಸಿದ್ದರಾಮಯ್ಯ, ಕೆ ಎನ್ ರಾಜಣ್ಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ. 

2019ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಸೋಲಿಸುವಲ್ಲಿ ರಾಜಣ್ಣ ಪ್ರಮುಖ ಪಾತ್ರ ವಹಿಸಿದ್ದರು. ಮಧುಗಿರಿ ಶಾಸಕರಾಗಿರುವ ಕೆ ಎನ್ ರಾಜಣ್ಣ 2004 ರಲ್ಲಿ ತುಮಕೂರು ಜಿಲ್ಲೆಯ ಹಿಂದಿನ ಬೆಳ್ಳಾವಿ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್‌ನಲ್ಲಿ ಮೊದಲ ಬಾರಿಗೆ ಆಯ್ಕೆಯಾದರು. 2005 ರಲ್ಲಿ ಜೆಡಿಎಸ್ ತೊರೆದ ಸಿದ್ದರಾಮಯ್ಯನವರನ್ನು ಅವರು ಅಂದು ಅನುಸರಿಸಿಕೊಂಡು ಹೋಗಿರಲಿಲ್ಲ.  ನಂತರ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ರಾಜಣ್ಣ ಕಾಂಗ್ರೆಸ್ ಸೇರಿದರು. 

2008 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ನಂತರದ ಉಪಚುನಾವಣೆಯಲ್ಲಿ, ರಾಜಣ್ಣ ಅವರು ಮಧುಗಿರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತರು. ಕುರುಬ ಸಮುದಾಯದವರು ತಮ್ಮ ನಾಯಕ ಸಿದ್ದರಾಮಯ್ಯನವರನ್ನು ಹಿಂಬಾಲಿಸಿಕೊಂಡು ಹೋಗದಿದ್ದ ರಾಜಣ್ಣಗೆ ಜನ ತಕ್ಕ ಪಾಠ ಕಲಿಸಿದ್ದರು.ಸಿದ್ದರಾಮಯ್ಯ ಕೂಡ ಪ್ರಚಾರದಿಂದ ದೂರ ಉಳಿದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com