ಬೆಂಗಳೂರು: ಕಾಲೇಜು ಹಾಸ್ಟೆಲ್ ಕೊಠಡಿಯಲ್ಲಿ ದಾವಣಗೆರೆ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಶವ ಪತ್ತೆ

20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಶನಿವಾರ ಇಲ್ಲಿನ ಕಾಲೇಜು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಶನಿವಾರ ಇಲ್ಲಿನ ಕಾಲೇಜು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

ಪೊಲೀಸರ ಪ್ರಕಾರ, ವಿವೇಕ್ ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಾಲ್ಕನೇ ಸೆಮಿಸ್ಟರ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿದ್ಯಾರ್ಥಿಯಾಗಿದ್ದ.

'ಶನಿವಾರ ಬೆಳಿಗ್ಗೆ, ತನ್ನ ಇತರ ರೂಮ್‌ಮೇಟ್‌ಗಳು ಉಪಾಹಾರಕ್ಕೆ ಹೋದಾಗ ದಾವಣಗೆರೆ ಮೂಲದ ಯುವಕ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ' ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ 10 ಗಂಟೆ ಸುಮಾರಿಗೆ ಆತನ ರೂಮ್‌ಮೇಟ್‌ಗಳು ಬಾಗಿಲು ಬಡಿದರೂ ಆತ ತೆರೆದಿಲ್ಲ. ಬಾಗಿಲು ಒಡೆದು ನೋಡಿದಾಗ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿತು ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಆತನನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com