ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್
ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದು, ಈ ವೇಳೆ ಶಕ್ತಿಯೋಜನೆಯ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಿದರು. ಸಮಾರಂಭದಲ್ಲಿ ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸ್ಮಾರ್ಟ್ ಕಾರ್ಡ್​ ವಿತರಣೆ ಮಾಡಿದರು. ​​

ಇದೇ ವೇಳೆ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್​​​​ ಕಾರ್ಡ್​​ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಬಿಡುಗಡೆ ಮಾಡಿದರು.

ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್​, ಮಧು ಬಂಗಾರಪ್ಪ, ಕೃಷ್ಣಭೈರೇಗೌಡ, ಶಾಸಕ ರಿಜ್ವಾನ್ ಅರ್ಷದ್, ಎಂಎಲ್​ಸಿ ಹರಿಪ್ರಸಾದ್​​, ಸಿಎಸ್​​ ವಂದಿತಾ ಶರ್ಮಾ, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್​.ವಿ.ಪ್ರಸಾದ್​, ಕೆಸ ಎಂಡಿ ಅನ್ಬುಕುಮಾರ್,​ ಬಿಎಂಟಿಸಿ ಎಂಡಿ ಸತ್ಯವತಿ ಉಪಸ್ಥಿತರಿದ್ದಾರೆ.

ಕಾರ್ಯಕ್ರಮದಲ್ಲಿ ಎರಡು ಬಿಎಂಟಿಸಿ ಬಸ್ ಗಳಿಗೆ ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ.  ಬಳಿಕ ಅದೇ ಬಸ್ ಗಳಲ್ಲಿ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಟರ್ಮಿನಲ್ 2 ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಅಲ್ಲಿ ಶೂನ್ಯದರದ ಟಿಕೆಟ್ ವಿತರಣೆ ಮಾಡುವ ಮೂಲಕ ಸಾಂಕೇತಿಕವಾಗಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com