ರಾಜ್ಯ

ಬೆಳಗಾವಿ: ಮದುವೆ ಖುಷಿಯಲ್ಲಿ ಊರಿಗೆ ಬರುತ್ತಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ದುರ್ಮರಣ!

ಇನ್ನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯೋಧನೊಬ್ಬ ರೈಲಿನಿಂದ ಕಾಲು ಜಾರಿ ಬಿದ್ದು, ಮಸಣದ ಹಾದಿ ತುಳಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ಮದುವೆ ಖುಷಿಯಲ್ಲಿ ಊರಿಗೆ ಬರುತ್ತಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ದುರ್ಮರಣ!
ಮೃತ ಯೋಧ ಕಾಶಿನಾಥ ಶಿಂಧಿಗಾರ
Published On :

ಬೆಳಗಾವಿ: ಇನ್ನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯೋಧನೊಬ್ಬ ರೈಲಿನಿಂದ ಕಾಲು ಜಾರಿ ಬಿದ್ದು, ಮಸಣದ ಹಾದಿ ತುಳಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಕಾಶಿನಾಥ ಶಿಂಧಿಗಾರ (28) ಮೃತ ಯೋಧ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದ ವೀರ ಯೋಧರಾಗಿದ್ದು, ಕಳೆದ 8 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮದುವೆಗೆಂದು ಪಂಜಾಬ್‌ನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವವೇಳೆ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ರೈಲು ಚಲಿಸುವ ವೇಳೆ ಯೋಧ ರೈಲಿನ ಬಾಗಿಲಿನ ಬಳಿ ಕುಳಿತುಕೊಂಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ರೈಲಿನಿಂದ ಕಾಲು ಜಾರಿ ಬಿದ್ದು, ಗಂಭೀರವಾಗಿ ಗಾಯಗೊಂಡ ಯೋಧನನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜೂನ್.8ರಂದು ಸಾವನ್ನಪ್ಪಿದ್ದಾರೆ.

ಯೋಧನ ಸಾವಿನಿಂದ ಸ್ವಗ್ರಾಮ ಕನಸಗೇರಿಯಲ್ಲಿ ಸ್ಮಶಾನ ಮೌನ ಆವರಿಸಿದ್ದು, ದುಃಖ ಮಡುಗಟ್ಟಿದೆ. ಮೃತ ಯೋಧನ ಪಾರ್ಥಿವ ಶರೀರ ಶನಿವಾರ ಸ್ವಗ್ರಾಮ ಕನಸಗೇರಿಗೆ ತಲುಪಿದ್ದು, ಅಂತ್ಯಕ್ರಿಯೆಯಲ್ಲಿ ಸುತ್ತಲಿನ ಗ್ರಾಮಗಳ ಸಾವಿರಾರು ಜನರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.